Tuesday, December 6, 2022
spot_img
Homeಸುದ್ದಿಕ್ರೈಸ್ಟ್‌ಕಿಂಗ್‌ನಲ್ಲಿ ಸಂಭ್ರಮಿಸಿದ ಮಕ್ಕಳ ಹಬ್ಬ

ಕ್ರೈಸ್ಟ್‌ಕಿಂಗ್‌ನಲ್ಲಿ ಸಂಭ್ರಮಿಸಿದ ಮಕ್ಕಳ ಹಬ್ಬ

ಕಾರ್ಕಳ : ಸಣ್ಣ ವಯಸ್ಸಿನಲ್ಲೇ ಒಳ್ಳೆಯ ಗುಣಗಳನ್ನು ರೂಢಿಸಿಕೊಳ್ಳಬೇಕು. ಹಾಗಿದ್ದಾಗ ಮಾತ್ರ ಮಕ್ಕಳು ಮುಂದೆ ಉತ್ತಮ ನಾಗರಿಕರಾಗಿ ರೂಪುಗೊಳ್ಳುತ್ತಾರೆ. ಗಾಂಧಿ ಹೇಳಿದ ಸತ್ಯ, ಅಹಿಂಸೆಯ ಮಾರ್ಗದಲ್ಲಿ ನಡೆಯಬೇಕು ಎಂದು ಪ್ರಧಾನ ಸಿವಿಲ್‌ ನ್ಯಾಯಾಧೀಶೆ ಚೇತನಾ ಎಸ್‌. ಎಫ್.‌, ಹೇಳಿದರು. ಅವರು ನ.14 ರಂದು ಗಾಂಧೀ ಮೈದಾನದಲ್ಲಿ ಕ್ರೈಸ್ಟ್‌ಕಿಂಗ್‌ನ ಶಿಕ್ಷಕ-ರಕ್ಷಕ ಸಂಘದ ಆಶ್ರಯದಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ನಡೆದ ಮಕ್ಕಳ ಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪುರಸಭೆಯ ಮುಖ್ಯಾಧಿಕಾರಿ ರೂಪ ಟಿ. ಶೆಟ್ಟಿ ಮಾತನಾಡಿ, ಊರಿನ ಸ್ವಚ್ಛತೆ ಕಾಪಾಡುವಲ್ಲಿ ಮಕ್ಕಳ ಪಾತ್ರವೂ ಪ್ರಮುಖವಾದುದು ತಮ್ಮ ಸುತ್ತಮುತ್ತಲೂ ಸಂಗ್ರಹವಾಗುವ ಕಸವನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವಲ್ಲಿ ಕೈಜೋಡಿಸಬೇಕು, ಸ್ವಚ್ಛತಾ ಮನೋಭಾವನೆಯನ್ನು ಎಳವೆಯಿಂದಲೇ ಬೆಳೆಸಿಕೊಳ್ಳಬೇಕು ಹಾಗೂ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಕಡೆಗೆ ಹೆಚ್ಚಿನ ಗಮನಹರಿಸಬೇಕು ಎಂದು ಹೇಳಿದರು. ಶಿಕ್ಷಕ-ರಕ್ಷಕ ಸಂಘದ ಪದವಿಪೂರ್ವ ವಿಭಾಗದ ಅಧ್ಯಕ್ಷ ವಿವೇಕಾನಂದ ಶೆಣೈ ಸಂದರ್ಭೋಚಿತವಾಗಿ ಮಾತನಾಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಸಾಂಸ್ಕೃತಿಕ ಕಾರ್ಯಕ್ರಮ:
ಸಂಸ್ಥೆಯ ವಿದ್ಯಾರ್ಥಿಗಳಿಂದ ವಿಜ್ಞಾನ ಮಾದರಿಗಳ ಪ್ರದರ್ಶನ, ಕಲೆ ಮತ್ತು ಕರಕುಶಲ ವಸ್ತುಗಳ ಪ್ರದರ್ಶನ, ವಿವಿಧ ತಿಂಡಿ ತಿನಿಸುಗಳು ಹಾಗೂ ಮನೋರಂಜನಾ ಆಟಗಳ ಸ್ಟಾಲ್, ಸ್ಥಳದಲ್ಲಿಯೇ ಚಿತ್ರ ಬಿಡಿಸುವ ಚಟುವಟಿಕೆಗಳನ್ನು ನಡೆಸಲಾಯಿತು. ಮಕ್ಕಳಿಂದ ಚೆಂಡೆ ವಾದನ ಹಾಗೂ ವಿವಿದ ಮನೋರಂಜನಾ ಕಾರ್ಯಕ್ರಮಗಳು ಜರುಗಿದವು.

ಕಳೆದ ಸಾಲಿನ ಹತ್ತನೇ ತರಗತಿ ಫಲಿತಾಂಶದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಹಾಗೂ ರಾಜ್ಯಮಟ್ಟದ ಚೆಸ್ ಪ್ರತಿಭೆ ಸಂಸ್ಥೆಯ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕು.ಅನನ್ಯ ಎನ್ ಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕ್ರೈಸ್ಟ್‌ಕಿಂಗ್‌ ಎಜುಕೇಷನ್ ಟ್ರಸ್ಟ್‌ನ ಕಾರ್ಯದರ್ಶಿ ಆವೆಲಿನ್ ಲೂಯಿಸ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರುಗಳಾದ ಪ್ರೌಢಶಾಲಾ ವಿಭಾಗದ ಅಬ್ಬೂಬಕ್ಕರ್, ಪ್ರಾಥಮಿಕ ವಿಭಾಗದ ಅಜಿತ್ ಹೆಗ್ಡೆ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಮೇರಿಯನ್ ಡಿ’ಸೋಜ ಮೊದಲಾದವರು ಉಪಸ್ಥಿತರಿದ್ದರು. ಪ್ರೌಢಶಾಲಾ ಮುಖ್ಯ ಶಿಕ್ಷಕ ಡೊಮಿನಿಕ್ ಅಂದ್ರಾದೆ ಸ್ವಾಗತಿಸಿ, ವಿಜ್ಞಾನ ಶಿಕ್ಷಕಿ ವಿನಯಾ ನಿರೂಪಿಸಿದರು. ಪದವಿಪೂರ್ವ ವಿಭಾಗದ ಪ್ರಾಚಾರ್ಯ ಲಕ್ಷ್ಮೀ ನಾರಾಯಣ ಕಾಮತ್ ವಂದಿಸಿದರು.

LEAVE A REPLY

Please enter your comment!
Please enter your name here

Most Popular

error: Content is protected !!