Thursday, December 1, 2022
spot_img
Homeದೇಶಜಮ್ಮು ಕಾಶ್ಮೀರ : ಕಾರು ಕಂದಕಕ್ಕೆ ಉರುಳಿ ಮೂವರು ಅಧಿಕಾರಿಗಳ ದುರ್ಮರಣ

ಜಮ್ಮು ಕಾಶ್ಮೀರ : ಕಾರು ಕಂದಕಕ್ಕೆ ಉರುಳಿ ಮೂವರು ಅಧಿಕಾರಿಗಳ ದುರ್ಮರಣ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸೋಮವಾರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಕಾರು ರಸ್ತೆಯಿಂದ ಸ್ಕಿಡ್ ಆಗಿ ಆಳವಾದ ಕಂದಕಕ್ಕೆ ಬಿದ್ದ ಪರಿಣಾಮ ಮೂವರು ಅಧಿಕಾರಿಗಳು ಸಾವನ್ನಪ್ಪಿದ್ದು, ಅಪಘಾತದಲ್ಲಿ ಒರ್ವ ಅಧಿಕಾರಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಈ ಅಪಘಾತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಗಾಯಾಳುಗಳಿಗೆ ಸಾಧ್ಯವಿರುವ ಎಲ್ಲ ರೀತಿಯ ನೆರವು ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ. ವಾಹನವು ರಸ್ತೆ ಮತ್ತು ಕಟ್ಟಡ ಇಲಾಖೆಯ ತಂಡದ ಅಧಿಕಾರಿಗಳನ್ನು ಹೊತ್ತೊಯ್ಯುತ್ತಿದ್ದಾಗ ಬಟೋಟೆ-ಕಿಶ್ತ್ವಾರ್ ರಾಷ್ಟ್ರೀಯ ಹೆದ್ದಾರಿಯ ಅಸ್ಸಾರ್ ಬಳಿ ಅಪಘಾತ ಸಂಭವಿಸಿದೆ ಎಂದು ಸ್ಥಳೀಯ ಸ್ಟೇಷನ್ ಹೌಸ್ ಅಧಿಕಾರಿ ಭುವಿಂದರ್ ಕೊತ್ವಾಲ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Most Popular

error: Content is protected !!