Saturday, December 10, 2022
spot_img
Homeಸುದ್ದಿಬೆಳ್ಮಣ್ ಜೇಸಿಐ ವತಿಯಿಂದ ಮಕ್ಕಳ ದಿನಾಚರಣೆ

ಬೆಳ್ಮಣ್ ಜೇಸಿಐ ವತಿಯಿಂದ ಮಕ್ಕಳ ದಿನಾಚರಣೆ

ಕಾರ್ಕಳ: ಬೆಳ್ಮಣ್ ಜೇಸಿಐ, ಯುವ ಜೇಸಿ ವಿಭಾಗ, ಲೇಡಿ ಜೇಸಿ ವಿಭಾಗ, ಮುಂಡ್ಕೂರು ಕಡಂದಲೆ ಲಯನ್ಸ್ ಕ್ಲಬ್ ಹಾಗೂ ಸಚ್ಚೇರಿಪೇಟೆ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ನ.14 ರಂದು ಮಕ್ಕಳಿಗೆ ವಿವಿಧ ಸ್ಪರ್ಧೆಗಳು ಜರುಗಿತು. ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ಮಣ್ ಜೇಸಿಐ ಘಟಕಾಧ್ಯಕ್ಷ ಸತೀಶ್ ಪೂಜಾರಿ ಅಬ್ಬನಡ್ಕ ವಹಿಸಿದ್ದರು. ಸಚ್ಚೇರಿಪೇಟೆ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕ ಸತ್ಯಶಂಕರ್ ಶೆಟ್ಟಿ, ಮುಂಡ್ಕೂರು ಕಡಂದಲೆ ಲಯನ್ಸ್ ಕ್ಲಬ್‌ನ ಅಧ್ಯಕ್ಷ ಜಿನ್ನೋಜಿ ರಾವ್, ಪೂರ್ವಾಧ್ಯಕ್ಷ ವಿಶ್ವನಾಥ್ ಶೆಟ್ಟಿ, ಸಚ್ಚೇರಿಪೇಟೆ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯ ಧನಲಕ್ಷ್ಮೀ, ಬೆಳ್ಮಣ್ ಜೇಸಿಐ ಪೂವಾಧ್ಯಕ್ಷ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಕಾರ್ಯದರ್ಶಿ ಸರಿತಾ ದಿನೇಶ್ ಸುವರ್ಣ, ಕಾರ್ಯದರ್ಶಿ ನಿದೇರ್ಶಕಿ ಶ್ವೇತಾ ಎಸ್. ಆಚಾರ್ಯ, ಯುವ ಜೇಸಿ ಅಧ್ಯಕ್ಷ ಕೀರ್ತನ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Most Popular

error: Content is protected !!