Thursday, December 1, 2022
spot_img
Homeಸುದ್ದಿಪೆಟ್ರೋಲ್‌, ಡೀಸೆಲ್‌ ಜಿಎಸ್‌ಟಿ ವ್ಯಾಪ್ತಿಗೆ?

ಪೆಟ್ರೋಲ್‌, ಡೀಸೆಲ್‌ ಜಿಎಸ್‌ಟಿ ವ್ಯಾಪ್ತಿಗೆ?

ಕೇಂದ್ರದಲ್ಲಿ ನಡೆಯುತ್ತಿದೆ ಚಿಂತನೆ ಎಂದ ಸಚಿವರು

ಹೊಸದಿಲ್ಲಿ : ಜನರ ಬಹುಕಾಲದ ಬೇಡಿಕೆಯಾಗಿರುವ ಪೆಟ್ರೋಲ್ ಮತ್ತು ಡೀಸೆಲನ್ನು ಜಿಎಸ್‌ಟಿ ತೆರಿಗೆ ವ್ಯಾಪ್ತಿಗೆ ತರುವ ಕುರಿತು ಕೇಂದ್ರ ಸರಕಾರ ಚಿಂತನೆ ನಡೆಸುತ್ತಿದೆ ಎಂದು ಕೇಂದ್ರ ಸಚಿವರೊಬ್ಬರು ತಿಳಿಸಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಮಾರಾಟದಲ್ಲಿ ಸರಕು ಮತ್ತು ಸೇವಾ ತೆರಿಗೆ ವ್ಯಾಪ್ತಿಗೆ ತರಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.
ಆದರೆ ಪಟ್ರೋಲ್‌ ಮತ್ತು ಡೀಸೆಲ್‌ ಜಿಎಸ್‌ಟಿ ವ್ಯಾಪ್ತಿಗೆ ಜಾರಿಗೆ ತಂದರೆ ರಾಜ್ಯಗಳಿಗೆ ದೊಡ್ಡ ಮೊತ್ತದ ಕಂದಾಯ ನಷ್ಟವಾಗುತ್ತದೆ. ಹೀಗಾಗಿ ರಾಜ್ಯಗಳು ಇದಕ್ಕೆ ಸಹಮತ ವ್ಯಕ್ತಪಡಿಸುವ ಸಾಧ್ಯತೆ ಇಲ್ಲ. ಪೆಟ್ರೋಲ್-ಡೀಸೆಲ್ ಅನ್ನು ಜಿಎಸ್‌ಟಿ ವ್ಯಾಪ್ತಿಗೆ ತರಲು ರಾಜ್ಯಗಳ ಒಪ್ಪಿಗೆ ಅಗತ್ಯ. ಈ ದಿಸೆಯಲ್ಲಿ ರಾಜ್ಯಗಳು ಮುತುವರ್ಜಿ ವಹಿಸಿಬೇಕಾಗಿದೆ ಕೇಂದ್ರವೂ ಈ ಚಿಂತನೆಗೆ ಸಿದ್ಧವಾಗಿದೆ ಎಂದು ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.
ರಾಜ್ಯಗಳ ಆದಾಯದ ಮುಖ್ಯ ಮೂಲವೆಂದರೆ ಮದ್ಯ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ವಿಧಿಸುವ ತೆರಿಗೆ. ಜಿಎಸ್‌ಟಿ ಕೌನ್ಸಿಲ್‌ನಲ್ಲಿ ಈ ವಿಷಯವನ್ನು ಕೈಗೆತ್ತಿಕೊಳ್ಳಲು ಸೂಚಿಸಲಾಗಿತ್ತು. ಆದರೆ ರಾಜ್ಯಗಳ ಹಣಕಾಸು ಮಂತ್ರಿಗಳು ಅದನ್ನು ಒಪ್ಪಲಿಲ್ಲ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

Most Popular

error: Content is protected !!