Thursday, December 1, 2022
spot_img
Homeಸುದ್ದಿಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಬ್ರಾಹ್ಮಣರ ಅವಹೇಳನ

ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಬ್ರಾಹ್ಮಣರ ಅವಹೇಳನ

ಇಂದು ಸಮುದಾಯದವರಿಂದ ರಾಜ್ಯಾದ್ಯಂತ ಪ್ರತಿಭಟನೆ

ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸಿದ್ದರಾಮಯ್ಯ-75 ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಬ್ರಾಹ್ಮಣರನ್ನು ಅವಹೇಳನ ಮಾಡಲಾಗಿದೆ ಎಂದು ಬ್ರಾಹ್ಮಣ ಸಮುದಾಯದವರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯನವರ ಕಾರ್ಯಕ್ರಮದಲ್ಲಿ ಬ್ರಾಹ್ಮಣರ ಕುರಿತು ಅವಹೇಳನಕಾರಿ ಹೇಳಿಕೆ ನೀಡಲಾಗಿದೆ, ಬ್ರಾಹ್ಮಣ ಸಮುದಾಯದವರನ್ನೇ ಗುರಿಯಾಗಿಸಿಕೊಂಡು ಮಾತನಾಡಲಾಗಿದೆ ಎಂದು ಹೇಳಿರುವ ಬ್ರಾಹ್ಮಣ ನಿಗಮ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಗುರುವಾರ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದ್ದಾರೆ.
ಸಿದ್ದರಾಮಯ್ಯ-75 ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪುಸ್ತಕದ ಲೇಖಕ , ಸಿದ್ದರಾಮಯ್ಯ ಆಪ್ತ ಮಲ್ಲೇಶ್ ಬ್ರಾಹ್ಮಣ ಸಮುದಾಯವನ್ನು ನೇರವಾಗಿ ಗುರಿ ಮಾಡಿ ಮಾತನಾಡಿದ್ದಾರೆ, ಬ್ರಾಹ್ಮಣ ಸಮುದಾಯವನ್ನು ನಂಬಬೇಡಿ, ಇದರಿಂದ ದೇಶ ನಾಶವಾಗುತ್ತದೆ ಎಂದು ಹೇಳಿದ್ದಾರೆ. ಇಂತಹ ಹೇಳಿಕೆಯನ್ನು ನಾವು ಖಂಡಿಸುತ್ತೇವೆ, ನ. 17 ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದ್ದೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಮಲ್ಲೇಶ್‌ ಬ್ರಾಹ್ಮಣರನ್ನು ಟೀಕಿಸುತ್ತಿರುವಾಗ ಪಕ್ಕದಲ್ಲೇ ಸಿದ್ದರಾಮಯ್ಯ ಕುಳಿತಿದ್ದರು, ಆದರೆ ಅವರು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ.

LEAVE A REPLY

Please enter your comment!
Please enter your name here

Most Popular

error: Content is protected !!