Saturday, December 10, 2022
spot_img
Homeಸುದ್ದಿಬಾಲಕಿ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ 43 ವರ್ಷ ಜೈಲು

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ 43 ವರ್ಷ ಜೈಲು

ಮೈಸೂರು ಪೋಕ್ಸೊ ನ್ಯಾಯಾಲಯದ ಐತಿಹಾಸಿಕ ತೀರ್ಪು

ಮೈಸೂರು: ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ ಮೈಸೂರಿನ ಪೋಕ್ಸೊ ವಿಶೇಷ ನ್ಯಾಯಾಲಯ 43 ವರ್ಷಗಳ ಕಠಿಣ ಶಿಕ್ಷೆ, 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಅಪರಾಧಿ ಬಿಹಾರ ಮೂಲದವನು.
ವಿಶೇಷ ಕೋರ್ಟ್​ನ ನ್ಯಾಯಾಧೀಶೆ ಶೈಮಾ ಕಮರೋಜ್ ಈ ತೀರ್ಪು ನೀಡಿದ್ದಾರೆ. ಇದೇ ವೇಳೆ ಸಂತ್ರಸ್ತ ಬಾಲಕಿಗೆ 7 ಲಕ್ಷ ರೂ. ಪರಿಹಾರ ನೀಡುವಂತೆ ಸೂಚಿಸಿದ್ದಾರೆ. ಸಂತ್ರಸ್ತೆಯ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಕೆ.ಬಿ.ಜಯಂತಿ ವಾದ ಮಂಡಿಸಿದ್ದರು. 2021ರಲ್ಲಿ 10 ವರ್ಷದ ಬಾಲಕಿ ಮೇಲೆ ಅಪರಾಧಿ ನಿರಂತರ ಅತ್ಯಾಚಾರ ಎಸಗಿದ್ದ. ಮೈಸೂರು ಗ್ರಾಮಾಂತರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್​ಸ್ಪೆಕ್ಟರ್ ​​ಕೆ.ಜೀವನ್​ ತನಿಖಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಮೈಸೂರಿನ ಟಿ.ನರಸೀಪುರ ರಸ್ತೆಯ ತೋಟದ ಮನೆಯಲ್ಲಿ ಪೈಶಾಚಿಕ ಕೃತ್ಯ ನಡೆದಿತ್ತು.

LEAVE A REPLY

Please enter your comment!
Please enter your name here

Most Popular

error: Content is protected !!