Thursday, December 1, 2022
spot_img
Homeಸುದ್ದಿಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ: ಘಟನಾ ಸ್ಥಳಕ್ಕೆ ಗೃಹ ಸಚಿವರ ಭೇಟಿ

ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ: ಘಟನಾ ಸ್ಥಳಕ್ಕೆ ಗೃಹ ಸಚಿವರ ಭೇಟಿ

ಗಾಯಾಳು ಆಟೋ ಚಾಲಕನಿಗೆ 50 ಸಾ. ರೂ ಧನಸಹಾಯ

ಮಂಗಳೂರು : ಆಟೋದಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ನ.23 ರಂದು ಭೇಟಿ ನೀಡಿದರು. ನಂತರ ಕಂಕನಾಡಿಯ‌ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿಯವರ ಆರೋಗ್ಯ ವಿಚಾರಿಸಿದರು. ಈ ಸಂದರ್ಭ ಅವರಿಗೆ 50,000 ರೂ. ಧನಸಹಾಯ ನೀಡಿದರು. ಮತ್ತು ಚಿಕಿತ್ಸೆಯ ವೆಚ್ಚವನ್ನು ಸರ್ಕಾರದಿಂದಲೇ ಭರಿಸಲಾಗುವುದು ಎಂದು ಭರವಸೆ ನೀಡಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರ ಶಾರಿಕ್‌ ಸಹಚರನನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣವನ್ನು ಮತ್ತಷ್ಟು ಆಳವಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಗೃಹ ಸಚಿವರ ಮಂಗಳೂರು ಭೇಟಿ ಮಹತ್ವ ಪಡೆದುಕೊಂಡಿದೆ.

LEAVE A REPLY

Please enter your comment!
Please enter your name here

Most Popular

error: Content is protected !!