Saturday, December 10, 2022
spot_img
Homeಧಾರ್ಮಿಕಧರ್ಮಸ್ಥಳ : ಲಕ್ಷ ದೀಪೋತ್ಸವ ಕೇಂದ್ರ ಸಚಿವೆ ಸ್ಮೃತಿ ಇರಾನಿ ಕ್ಷೇತ್ರಕ್ಕೆ ಭೇಟಿ

ಧರ್ಮಸ್ಥಳ : ಲಕ್ಷ ದೀಪೋತ್ಸವ ಕೇಂದ್ರ ಸಚಿವೆ ಸ್ಮೃತಿ ಇರಾನಿ ಕ್ಷೇತ್ರಕ್ಕೆ ಭೇಟಿ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುವ ಲಕ್ಷ ದೀಪೋತ್ಸವದ ನಾಲ್ಕನೇ ದಿನ ನ.22ರಂದು ಸರ್ವಧರ್ಮದ ಸಾರವನ್ನು ನಾಡಿನ ಜನತೆಗೆ ಪಸರಿಸುವ 90ನೇ ಅಧಿವೇಶನ ನಡೆಯಿತು. ಲಕ್ಷ ದೀಪೋತ್ಸವದ ಸರ್ವಧರ್ಮ ಸಮ್ಮೇಳನದ 90ನೇ ಅಧಿವೇಶನದ ಉದ್ಘಾಟನೆಗೆ ಆಗಮಿಸಿದ ಗಣ್ಯರನ್ನು ಹೆಗ್ಗಡೆಯವರ ಬೀಡಿನಿಂದ ಭವ್ಯ ಮೆರವಣಿಗೆ ಮೂಲಕ ಅಮೃತವರ್ಷಿಣಿ ಸಭಾಭವನದೆಡೆಗೆ ಕರೆದುಕೊಂಡು ಬರಲಾಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ, ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥಿಸಿದರು. ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಬಳಿಕ ಸರ್ವಧರ್ಮ ಸಮ್ಮೇಳನವನ್ನು ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ ಶಿವಮೊಗ್ಗದ ಬಹುಶ್ರುತ ವಿದ್ವಾಂಸ ಎಂ.ಆರ್‌. ಸತ್ಯನಾರಾಯಣ, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವೀ. ಹೆಗ್ಗಡೆ, ಬಸ್ರಿಕಟ್ಟೆಯ ಫಾ. ಮಾರ್ಸೆಲ್‌ ಪಿಂಟೋ, ವಿಜಯಪುರದ ಹಾಸೀಂಪೀರ ಇ. ವಾಲಿಕಾರ, ಮೂಡುಬಿದಿರೆಯ ಮುನಿರಾಜ ರೆಂಜಾಳ, ಎಂಎಲ್‌ಸಿ ಪ್ರತಾಪಸಿಂಹ ನಾಯಕ್‌, ಡಿ. ಸುರೇಂದ್ರ ಕುಮಾರ್‌, ಡಿ. ಹರ್ಷೇಂದ್ರ ಕುಮಾರ್‌, ಡಿ. ರಾಜೇಂದ್ರ ಕುಮಾರ್‌, ಅಮಿತ್‌ ಕುಮಾರ್‌, ಡಿ. ಶ್ರೇಯಸ್‌ ಕುಮಾರ್‌, ಎಸ್‌ಡಿಎಂ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್‌., ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್‌.ಎಚ್‌. ಮಂಜುನಾಥ್‌, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್‌ ಕುಮಾರ್‌, ಸಿರಿ ಸಂಸ್ಥೆ ಆಡಳಿತ ನಿರ್ದೇಶಕ ಕೆ.ಎನ್‌. ಜನಾರ್ದನ್‌ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Most Popular

error: Content is protected !!