Tuesday, December 6, 2022
spot_img
Homeಸುದ್ದಿಬಿಜೆಪಿ ನಾಯಕ ಬಿ.ಎಲ್‌.ಸಂತೋಷ್‌ಗೆ ಲುಕ್‌ಔಟ್‌ ನೋಟಿಸ್‌ ಜಾರಿ

ಬಿಜೆಪಿ ನಾಯಕ ಬಿ.ಎಲ್‌.ಸಂತೋಷ್‌ಗೆ ಲುಕ್‌ಔಟ್‌ ನೋಟಿಸ್‌ ಜಾರಿ

ಟಿಆರ್‌ಎಸ್‌ ಶಾಸಕರನ್ನು ಖರೀದಿಸಲು ಯತ್ನಿಸಿದ ಪ್ರಕರಣ

ಹೈದರಾಬಾದ್‌ : ಶಾಸಕರ ಖರೀದಿ ಪ್ರಯತ್ನ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರಿಗೆ ತೆಲಂಗಾಣದ ವಿಶೇಷ ತನಿಖಾ ತಂಡ (ಎಸ್‌ಐಟಿ) ಲುಕ್‌ಔಟ್‌ ನೋಟಿಸ್‌ ಜಾರಿಗೊಳಿಸಿದೆ. ಸಂತೋಷ್‌ ಜತೆಗೆ ತುಷಾರ್ ಮತ್ತು ಜಗ್ಗು ಸ್ವಾಮಿ ವಿರುದ್ಧ ಕೂಡ ಲುಕ್‌ಔಟ್ ನೋಟಿಸ್‌ ಹೊರಡಿಸಲಾಗಿದೆ.
ಸೋಮವಾರ ತೆಲಂಗಾಣ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರ ಸಂಬಂಧಿ ವಕೀಲ ಭೂಸರಪು ಶ್ರೀನಿವಾಸ್ ಎಂಬವರು ಶಾಸಕರ ಖರೀದಿ ಪ್ರಕರಣದ ತನಿಖೆ ನಡೆಸುತ್ತಿರುವ ರಾಜ್ಯ ಪೊಲೀಸ್‌ ಎಸ್‌ಐಟಿ ಮುಂದೆ ಹಾಜರಾಗಿದ್ದರು. ಆದರೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮತ್ತು ಇತರ ಇಬ್ಬರು ತಮಗೆ ನೀಡಲಾದ ನೋಟಿಸ್‌ಗೆ ಇನ್ನೂ ಪ್ರತಿಕ್ರಿಯಿಸಿರಲಿಲ್ಲ.ಈ ಹಿನ್ನೆಲೆಯಲ್ಲಿ ಲುಕ್‌ಔಟ್‌ ನೋಟಿಸ್‌ ಜಾರಿಯಾಗಿದೆ.
ನ.19 ರಂದು ತೆಲಂಗಾಣ ಹೈಕೋರ್ಟ್ ಬಿಎಲ್‌ ಸಂತೋಷ್‌ಗೆ ನೀಡಲಾದ ನೋಟಿಸ್‌ಗೆ ತಡೆ ನೀಡುವಂತೆ ತೆಲಂಗಾಣ ರಾಜ್ಯ ಬಿಜೆಪಿ ಘಟಕದ ಮನವಿಯನ್ನು ತಿರಸ್ಕರಿಸಿತ್ತು. ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 41 ಎ ಅಡಿಯಲ್ಲಿ ಎಸ್‌ಐಟಿ ಈಗಾಗಲೇ ನೋಟಿಸ್ ಜಾರಿ ಮಾಡಿರುವುದರಿಂದ ಸಂತೋಷ್ ಅವರನ್ನು ಬಂಧಿಸಬಾರದು ಎಂದು ನ್ಯಾಯಮೂರ್ತಿ ಬಿ.ವಿಜಯ್‌ಸೇನ್ ರೆಡ್ಡಿ ಹೇಳಿದ್ದಾರೆ.

LEAVE A REPLY

Please enter your comment!
Please enter your name here

Most Popular

error: Content is protected !!