Thursday, December 1, 2022
spot_img
Homeಸುದ್ದಿಕರಾವಳಿಯಲ್ಲಿ ಕೆಂಗಣ್ಣು ಹಾವಳಿ

ಕರಾವಳಿಯಲ್ಲಿ ಕೆಂಗಣ್ಣು ಹಾವಳಿ

ನೂರಾರು ಮಂದಿಗೆ ಹರಡಿದ ರೋಗ

ಮಂಗಳೂರು : ಕರಾವಳಿ ಭಾಗದಲ್ಲಿ ಕೆಂಗಣ್ಣು ರೋಗದ ಹಾವಳಿ ಶುರುವಾಗಿದೆ. ಒಬ್ಬರಿಂದ ಒಬ್ಬರಿಗೆ ಬಹಳ ವೇಗವಾಗಿ ಹರಡುವ ಈ ರೋಗದಿಂದ ಈಗಾಗಲೇ ಸಾವಿರಾರು ಜನ ಬಳಲುತ್ತಿದ್ದಾರೆ. ಕಣ್ಣಿನ ಆಸ್ಪತ್ರೆಗೆ ಚಿಕಿತ್ಸೆಗೆ ಬರುವ ರೋಗಿಗಳ ಸಂಖ್ಯೆ ಹೆಚ್ಚಾಗಿದ್ದು ಜಿಲ್ಲಾ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ವಹಿಸುವಂತೆ ಜನರಿಗೆ ಸೂಚನೆ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೆಂಗಣ್ಣು ಕಾಯಿಲೆ ಹೆಚ್ಚಾಗುತ್ತಿದೆ. ಮಂಗಳೂರು ನಗರ , ಬಂಟ್ವಾಳ, ಬೆಳ್ತಂಗಡಿ ತಾಲೂಕು ಪರಿಸರದಲ್ಲಿ ಹೆಚ್ಚಿನ ಜನ ಈ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಈ ಕಾಯಿಲೆಯಿಂದ ಬಳಲುತ್ತಾ ಊರಿನಲ್ಲಿ ಕಪ್ಪು ಕನ್ನಡಕ ಧರಿಸಿ ಓಡಾಡುತ್ತಿರುವವರ ಸಂಖ್ಯೆ ಏರುತ್ತಿದೆ. ಬಾಧಿತರಲ್ಲಿ ವಿದ್ಯಾರ್ಥಿಗಳು ಮತ್ತು ವ್ಯಾಪಾರಿಗಳು ಹೆಚ್ಚಿದ್ದು ಇವರ ಮೂಲಕ ಈ ವೈರಸ್ ಇತರರಿಗೆ ವೇಗವಾಗಿ ಹರಡುತ್ತಿದೆ. ದಿನವೊಂದಕ್ಕೆ 100ಕ್ಕಿಂತ ಹೆಚ್ಚು ಜನ ಈ ಕೆಂಗಣ್ಣು ಕಾಯಿಲಿಗೆ ತುತ್ತಾಗುತ್ತಿದ್ದಾರೆ.
ತಮಿಳುನಾಡಿನಲ್ಲಿ ಮೊದಲು ಕಾಣಿಸಿಕೊಂಡ ಕೆಂಗಣ್ಣು ರೋಗ ಅಲ್ಲಿಂದಲೇ ಕರಾವಳಿಗೆ ಹರಡಿರಬಹುದು ಎನ್ನಲಾಗುತ್ತಿದೆ.
ಮದ್ರಾಸ್ ಐ ಎಂದು ಕರೆಯಲ್ಪಡುವ ಕೆಂಗಣ್ಣು ಅಥವಾ ಕಂಜಕ್ಟಿವಿಟಿಸ್‌ಗೆ ಕಾರಣ ವೈರಾಣು ಅಥವಾ ಬ್ಯಾಕ್ಟೀರಿಯಾ. ಕಣ್ಣಿನ ಬಿಳಿಭಾಗದ ಮೇಲೆ ಮತ್ತು ಕಣ್ಣಿನ ರೆಪ್ಪೆಗಳ ಒಳಭಾಗ ಉರಿಯೂತಕ್ಕೆ ಈಡಾಗಿ ಕೆಂಪು ಅಥವಾ ಗುಲಾಬಿ ಬಣ್ಣ ಹೊಂದಿ ಉದಿಕೊಳ್ಳುವುದು ಇದರ ಲಕ್ಷಣ.
ಇದು ಬಹುಬೇಗ ಹರಡುವ ರೋಗವಾಗಿದ್ದು ಇದು ಕಣ್ಣಿನ ಕಪ್ಪು ಗುಡ್ಡೆ ಪ್ರದೇಶಕ್ಕೆ ಹರಡಿದರೆ ದೃಷ್ಟಿಗೆ ಸಂಚಕಾರ ಎದುರಾಗುವ ಸಾಧ್ಯತೆಯಿದೆ. ಹೀಗಾಗಿ ಕೆಂಗಣ್ಣು ರೋಗ ಪ್ರದೇಶದಲ್ಲಿ ಇರುವವರು ಕಣ್ಣನ್ನು ಮುಟ್ಟಿಕೊಳ್ಳದಿರುವುದು, ಆಗಾಗ ಕೈ ಸ್ವಚ್ಛಗೊಳಿಸುತ್ತಿರುವುದು, ವೈರಸ್‌ಗೆ ತುತ್ತಾದವರ ಸಂಪರ್ಕದಿಂದ ದೂರವಿರುವುದರಿಂದ ರೋಗ ಹರಡುವುದರಿಂದ ತಪ್ಪಿಸಿಕೊಳ್ಳಬಹುದು ಎಂದು ನೆತ್ರತಜ್ಞರು ಹೇಳಿದ್ದಾರೆ.
ಈ ರೋಗ ಬಾಧೆಯಿಂದಾಗಿ ಬೆಳ್ತಂಗಡಿಯ ಖಾಸಗಿ ಶಾಲೆಯೊಂದಕ್ಕೆ ರಜೆ ನೀಡಲಾಗಿದೆ. ಕೆಂಗಣ್ಣು ರೋಗದಿಂದ ಬಳಲುತ್ತಿರುವ ವಿದ್ಯಾರ್ಥಿಗಳಿಗೆ ರಜೆ ನೀಡುವಂತೆ ಶಿಕ್ಷಣ ಇಲಾಖೆ ಶಾಲೆಗಳಿಗೆ ಸೂಚನೆ ನೀಡಿದೆ.

LEAVE A REPLY

Please enter your comment!
Please enter your name here

Most Popular

error: Content is protected !!