Tuesday, December 6, 2022
spot_img
Homeಸುದ್ದಿಹಿಂದುಯೇತರರಿಗೆ ವ್ಯಾಪಾರಕ್ಕೆ ಅವಕಾಶ ನೀಡದಂತೆ ಸುಬ್ರಹ್ಮಣ್ಯದಲ್ಲಿ ಬ್ಯಾನರ್‌

ಹಿಂದುಯೇತರರಿಗೆ ವ್ಯಾಪಾರಕ್ಕೆ ಅವಕಾಶ ನೀಡದಂತೆ ಸುಬ್ರಹ್ಮಣ್ಯದಲ್ಲಿ ಬ್ಯಾನರ್‌


ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಉತ್ಸವ ಸಂದರ್ಭದಲ್ಲಿ ಹಿಂದುಯೇತರರು ವ್ಯಾಪಾರ ವಹಿವಾಟು ನಡೆಸುವುದನ್ನು ನಿಷೇಧಿಸಲಾಗಿದೆ ಎಂಬ ಬ್ಯಾನರ್‌ ಹಾಕಿರುವುದು ವಿವಾದಕ್ಕೆಡೆಮಾಡಿಕೊಟ್ಟಿದೆ.
ಸುಬ್ರಹ್ಮಣ್ಯ ಸಮೀಪ ಕುಮಾರಧಾರ ಬಳಿ ದೇವಸ್ಥಾನದ ಪ್ರವೇಶ ದ್ವಾರದ ಪಕ್ಕದಲ್ಲಿ ಈ ಬ್ಯಾನರ್‌ ಅಳವಡಿಸಲಾಗಿದೆ. ಹಿಂದು ಜಾಗರಣ ವೇದಿಕೆ ಸುಬ್ರಹ್ಮಣ್ಯ ಘಟಕದ ಹೆಸರಿನಲ್ಲಿರುವ ಬ್ಯಾನರ್‌ನಲ್ಲಿ ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿಯ ಸಂದರ್ಭದಲ್ಲಿ ಈ ಪರಿಸರದಲ್ಲಿ ಅನ್ಯ ಮತೀಯರ ವ್ಯಾಪಾರ ವಹಿವಾಟುಗಳನು ನಿಷೇಧಿಸಲಾಗಿದೆ ಎಂದು ಬರೆಯಲಾಗಿದೆ. ಇದೇ ವೇಳೆ ಕುಕ್ಕೆ ಸುಬ್ರಹ್ಮಣ್ಯ ಜಾತ್ರೆ ಸಂದರ್ಭದಲ್ಲಿ ಹಿಂದುಯೇತರರಿಗೆ ವ್ಯಾಪಾರಕ್ಕೆ ಅವಕಾಶ ನೀಡದಂತೆ ಸುಬ್ರಹ್ಮಣ್ಯ ಠಾಣೆಗೆ ಹಿಂದೂ ಜಾಗರಣ ವೇದಿಕೆಯ ಸುಬ್ರಹ್ಮಣ್ಯ ಘಟಕ ದೂರು ನೀಡಿದೆ.
ಮುಜರಾಯಿ ಇಲಾಖೆಯಡಿಯಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಹಾಗೂ ಬ್ರಹ್ಮರಥೋತ್ಸವ ನ.29ರಿಂದ ನಡೆಯಲಿದೆ.

LEAVE A REPLY

Please enter your comment!
Please enter your name here

Most Popular

error: Content is protected !!