Saturday, December 10, 2022
spot_img
Homeಸ್ಥಳೀಯ ಸುದ್ದಿನ.25 : ಕಾರ್ಕಳದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ

ನ.25 : ಕಾರ್ಕಳದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ

ಕಾರ್ಕಳ : ಸಾಹಿತ್ಯ ಹಾಗೂ ಕಲಾಭಿಮಾನಿಗಳ ನೇತೃತ್ವದಲ್ಲಿ 2022 ನೇ ಸಾಲಿನ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪಡೆದಿರುವ ಯಕ್ಷಗಾನ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಡಾ. ಎಂ. ಪ್ರಭಾಕರ ಜೋಶಿ, ಹೋಟೆಲ್ ಉದ್ಯಮದಲ್ಲಿ ಯಶಸ್ಸನ್ನು ಸಾಧಿಸಿರುವ ಜಯರಾಮ್ ಬನಾನ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಕಾರ್ಯನಿವಾಹಕ ನಿರ್ದೇಶಕ ಡಾ. ಎಲ್. ಹೆಚ್. ಮಂಜುನಾಥ್ ಇವರಿಗೆ ಶುಕ್ರವಾರ ಸಂಜೆ 4 ಗಂಟೆಗೆ ಕಾರ್ಕಳದ ಮಂಜುನಾಥ್ ಪೈ ಸಭಾಂಗಣದಲ್ಲಿ ಅಭಿನಂದನಾ ಕಾರ್ಯಕ್ರಮವು ಕರ್ನಾಟಕ ಸರಕಾರ ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜರುಗಲಿರುವುದು ಎಂದು ಕಾರ್ಯಕ್ರಮದ ಸಂಯೋಜಕ ಕರುಣಾಕರ್ ಎಸ್. ಕೋಟ್ಯಾನ್ ಹಾಗೂ ರಾಜೇಶ್ ರೆಂಜಾಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

Most Popular

error: Content is protected !!