Thursday, December 1, 2022
spot_img
Homeಸುದ್ದಿಭೀಕರ ಅಗ್ನಿ ಅವಘಡ : 50 ಅಂಗಡಿ ಭಸ್ಮ

ಭೀಕರ ಅಗ್ನಿ ಅವಘಡ : 50 ಅಂಗಡಿ ಭಸ್ಮ


ದಿಲ್ಲಿ : ಉತ್ತರ ದೆಹಲಿಯ ಚಾಂದ್‌ನಿ ಚೌಕ್‌ನ ಭಾಗೀರಥ್ ಪ್ಯಾಲೇಸ್ ಪ್ರದೇಶದಲ್ಲಿರುವ ಹೋಲ್‌ಸೇಲ್ ಮಾರ್ಕೆಟ್‌ನಲ್ಲಿ ಗುರುವಾರ ರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿ ಸುಮಾರು 50 ಅಂಗಡಿಗಳು ಸುಟ್ಟು ಭಸ್ಮವಾಗಿವೆ.
ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಹರಸಾಹಸಪಟ್ಟಿದ್ದಾರೆ. ಶುಕ್ರವಾರ ಬೆಳಿಗ್ಗೆಯೂ ಬೆಂಕಿ ನಂದಿಸುವ ಕಾರ್ಯ ಮುಂದುವರಿದಿದೆ.ಸುಅಮರು 60 ಅಗ್ನಿಶಾಮಕ ವಾಹನಗಳು ಕಾರ್ಯಾಚರಣೆ ನಡೆಸುತ್ತಿವೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಅಂಗಡಿಯೊಂದರಲ್ಲಿ ಕಾಣಿಸಿಕೊಂಡ ಬೆಂಕಿ ಮಾರುಕಟ್ಟೆಯ ಇತರ ಅಂಗಡಿಗಳಿಗೂ ವ್ಯಾಪಿಸಿದೆ. ಮಧ್ಯಾಹ್ನದ ತನಕ ಬೆಂಕಿ ಹತೋಟಿಗೆ ಬಂದಿಲ್ಲ. ಅಗ್ನಿಶಾಮಕ ದಳ ಹಾಗೂ ಪೊಲೀಸರು ಸ್ಥಳದಲ್ಲಿದ್ದಾರೆ.

LEAVE A REPLY

Please enter your comment!
Please enter your name here

Most Popular

error: Content is protected !!