Thursday, December 1, 2022
spot_img
Homeಸುದ್ದಿಶಬರಿಮಲೆ ದರ್ಶನ ಸಮಯ ವಿಸ್ತರಣೆ

ಶಬರಿಮಲೆ ದರ್ಶನ ಸಮಯ ವಿಸ್ತರಣೆ

ಭಕ್ತಸಾಗರ ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಬದಲಾವಣೆ

ಶಬರಿಮಲೆ : ಅಯ್ಯಪ್ಪನ ದರ್ಶನಕ್ಕೆ ಈ ವರ್ಷ ಭಕ್ತಸಾಗರ ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲು ದೇವಸ್ಥಾನದ ಆಡಳಿತ ಮಂಡಳಿ ನಿರ್ಧರಿಸಿದೆ.
ಕಳೆದ ಎರಡು ವರ್ಷಗಳ ಕಾಲ ಮಹಾಮಾರಿ ಕೊರೊನಾ ಕಾರಣದಿಂದಾಗಿ ನಿಗದಿತ ಭಕ್ತರಿಗಷ್ಟೇ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಇದೀಗ ಕೊರೊನಾ ತಗ್ಗಿದ ಕಾರಣ ಈ ವರ್ಷ ನಿರ್ಬಂಧಗಳನ್ನು ತೆರವು ಮಾಡಲಾಗಿದೆ. ನಿತ್ಯ ಒಂದು ಲಕ್ಷಕ್ಕೂ ಹೆಚ್ಚು ಭಕ್ತರು ದರ್ಶನ ಪಡೆಯುತ್ತಿದ್ದಾರೆ. ಹಾಗಾಗಿ ಮಧ್ಯಾಹ್ನ 3ರಿಂದ ರಾತ್ರಿ 11ರ ವರೆಗೆ ದರ್ಶನ ಸಮಯ ವಿಸ್ತರಿಸಲಾಗಿದೆ.
ಈ ಮೊದಲು ನಸುಕಿನ 3ರಿಂದ ಮಧ್ಯಾಹ್ನ 1ರವರೆಗೆ ಮತ್ತು ಸಂಜೆ 4ರಿಂದ ಮಧ್ಯರಾತ್ರಿಯವರೆಗೆ ಅಯ್ಯಪ್ಪ ದರ್ಶನಕ್ಕೆ ಅವಕಾಶವನ್ನು ಕಲ್ಪಿಸಲಾಗಿತ್ತು. ನ. 16ರಿಂದ ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆರೆದಿದ್ದು, ಎಲ್ಲೆಡೆಗಳಿಂದ ಭಕ್ತರು ಬರುತ್ತಿದ್ದಾರೆ.
ಪ್ರತ್ಯೇಕ ರೈಲಿನ ವ್ಯವಸ್ಥೆ
ಶಬರಿಮಲೆ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಬೆಳಗಾವಿ ಹಾಗೂ ಹುಬ್ಬಳ್ಳಿಯಿಂದ ಪ್ರತ್ಯೇಕವಾಗಿ ರೈಲು ಓಡಿಸಲು ನೈರುತ್ಯ ರೈಲ್ವೆ ನಿರ್ಧರಿಸಿದೆ. ಈ ಎರಡೂ ಕಡೆಗಳಿಂದ ಶಬರಿಮಲೆ ಸಮೀಪದ ಕೊಲ್ಲಂಗೆ ರೈಲು ವ್ಯವಸ್ಥೆ ಮಾಡಲಾಗಿದೆ.

LEAVE A REPLY

Please enter your comment!
Please enter your name here

Most Popular

error: Content is protected !!