ಪೆರ್ವಾಜೆ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

ಸದೃಢ ದೇಹದೊಂದಿಗೆ ಸದೃಢ ಮನಸ್ಸನ್ನು ಹೊಂದಲು ಕ್ರೀಡೆ ಸಹಕಾರಿ – ವಿಪುಲ್‌ ತೇಜ್

ಕಾರ್ಕಳ : ಕ್ರೀಡೆಯು ವ್ಯಾಯಾಮದೊಂದಿಗೆ ಜೀವನೋತ್ಸಾಹವನ್ನು ನೀಡುತ್ತದೆ. ಸದೃಢ ದೇಹದೊಂದಿಗೆ ಸದೃಢ ಮನಸ್ಸನ್ನು ಹೊಂದಲು ಕ್ರೀಡೆ ಸಹಕಾರಿ ಎಂದು ನ್ಯಾಯವಾದಿ ವಿಪುಲ್‌ ತೇಜ್‌ ಹೇಳಿದರು. ಅವರು ಪೆರ್ವಾಜೆಯ ಸುಂದರ ಪುರಾಣಿಕ ಸ್ಮಾರಕ ಸರ್ಕಾರಿ ಪ್ರೌಢಶಾಲೆಯ ರಜತ ಮಹೋತ್ಸವದ ಅಂಗವಾಗಿ ಶಾಲಾ ಮಕ್ಕಳಿಗೆ ನ. 26 ರಂದು ನಡೆದ ಕ್ರೀಡೋತ್ಸವದಲ್ಲಿ ಮಾತನಾಡಿ, ಶಾಲೆಯಲ್ಲಿ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯಾದ ಕ್ರೀಡೆಗೆ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಎಂದರು. ಸಮಾರಂಭದ ಅಧ್ಯಕ್ಷತೆ ಎಸ್.ಡಿ.ಎಂ.ಸಿ. ಅಧ್ಯಕ್ಷ ವಿಜಯರಾಜ ಶೆಟ್ಟಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಸಂಜೀವ ದೇವಾಡಿಗ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಹರ್ಷಿಣಿ ಕೆ. ಸ್ವಾಗತಿಸಿದರು. ಶಾಲಾ ಕ್ರೀಡಾಮಂತ್ರಿ ಜೀವಿತಾ ಕ್ರೀಡಾ ಪ್ರತಿಜ್ಞೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಿದರು. ಕಲಾ ಶಿಕ್ಷಕಿ ಪ್ರತಿಮಾ ನಾಯಕ್ ನಿರೂಪಿಸಿ, ವಿಜ್ಞಾನ ಶಿಕ್ಷಕ ಹರಿಶ್ಚಂದ್ರ ಬಾಯರಿ ವಂದಿಸಿದರು.























error: Content is protected !!
Scroll to Top