ಡಿ. 25 ರಂದು ಉಡುಪಿಯಲ್ಲಿ ನಡೆಯಲಿರುವ ಬಿಜೆಪಿ ಬೂತ್ ಸಂಗಮ ಕುರಿತು ಪೂರ್ವಭಾವಿ ಸಭೆ

ಉಡುಪಿ : ಭಾರತೀಯ ಜನತಾ ಪಾರ್ಟಿ ಉಡುಪಿ ನಗರ ಹಾಗೂ ಗ್ರಾಮಾಂತರ ವತಿಯಿಂದ ಮಾಜಿ ಪ್ರಧಾನ ಮಂತ್ರಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ 98ನೇ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿರುವ ಅಟಲ್ ಉತ್ಸವ ಪ್ರಯುಕ್ತ ಡಿಸೆಂಬರ್ 25 ರಂದು ನಡೆಯುವ ಬೂತ್ ಸಂಗಮದ ಪೂರ್ವ ತಯಾರಿಯ ಬಗ್ಗೆ ಬೂತ್ ಉಸ್ತುವಾರಿಗಳೊಂದಿಗೆ ಡಿ. 13 ರಂದು ಶಾಸಕ ಕೆ. ರಘುಪತಿ ಭಟ್ ಸಭೆ ನಡೆಸಿ ಚರ್ಚಿಸಿದರು. ಈ ಸಂದರ್ಭ ಉಡುಪಿ ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಜಿಲ್ಲಾ ಬಿಜೆಪಿ ವಕ್ತಾರ ರಾಘವೇಂದ್ರ ಕಿಣಿ, ಉಡುಪಿ ನಗರಸಭೆಯ ಅಧ್ಯಕ್ಷ ಸುಮಿತ್ರಾ ಆರ್ ನಾಯಕ್, ಕಾರ್ಯಕ್ರಮದ ಸಂಚಾಲಕ ಉಮೇಶ್ ನಾಯ್ಕ್, ಗಿರೀಶ್ ಅಂಚನ್ ಮೊದಲಾದವರು ಉಪಸ್ಥಿತರಿದ್ದರು.

































































































error: Content is protected !!
Scroll to Top