ಗ್ರಾಮೀಣ ಪ್ರದೇಶದ ವಿದ್ಯಾಸಂಸ್ಥೆಗಳು ಶೈಕ್ಷಣಿಕ ಅಭಿವೃದ್ಧಿಗೆ ಪೂರಕ – ವಿ. ಸುನೀಲ್ ಕುಮಾರ್
ಸಾಹಿತ್ಯಿಕ, ಮಾನವಿಕ ಅಂಶ ಪ್ರತಿ ವಿದ್ಯಾರ್ಥಿಗಳ ಗುರಿಯಾಗಬೇಕು – ಡಾ. ನರೇಂದ್ರ ದೇರ್ಲ
ಕಾರ್ಕಳ : ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಕ್ರಿಯೇಟಿವ್ ಆವಿರ್ಭವ್ ಪ್ರತಿಭಾ ಪುರಸ್ಕಾರ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನೆ ಮತ್ತು ಕಾಲೇಜು ವಾರ್ಷಿಕೋತ್ಸವ ಡಿ.23 ಮತ್ತು 24ರಂದು ಜರುಗಿತು. ಪ್ರಥಮ ದಿನದಂದು ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಉದಯಕುಮಾರ್ ಶೆಟ್ಟಿ ಭಾಗವಹಿಸಿದ್ದು, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು ಗ್ರಾಮೀಣ ಪ್ರದೇಶದಲ್ಲಿ ಇರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಕ್ರಿಯೇಟಿವ್‌ನಂತಹ ಸಂಸ್ಥೆಗಳು ಒಂದು ವರದಾನ. ಇಂತಹ ಸಂಸ್ಥೆಗಳಿಂದ ವಿದ್ಯೆ ಪಡೆದ ಮಕ್ಕಳು ದೇಶವೇ ಗೌರವಿಸುವ ಸಾಧನೆ ಮಾಡಲಿ ಎಂದು ಶುಭಹಾರೈಸಿದರು. ವಿಶ್ವೇಶ್ವರಯ್ಯ ತಾಂತ್ರಿಕ ವಿ.ವಿ.ಯ ಸಿಂಡಿಕೇಟ್ ಸದಸ್ಯ ಮತ್ತು ವಕೀಲ ಎಂ.ಕೆ ಸುವ್ರತ್‌ಕುಮಾರ್ ಅವರು ಮಾತನಾಡಿ ವಿದ್ಯಾರ್ಥಿಗಳು ತಂತ್ರಜ್ಞಾನ ಆಧಾರಿತ ಯುಗದಲ್ಲಿ ಅದಕ್ಕೆ ತಕ್ಕ ವೇಗದಲ್ಲಿ ನಮ್ಮನ್ನು ನಾವು ಹೊಂದಿಸಿಕೊಳ್ಳಬೇಕು. ಜಗತ್ತಿನ ಅನೇಕ ಸಂಸ್ಥೆಗಳ ಮುಖ್ಯ ಭೂಮಿಕೆಯಲ್ಲಿ ಭಾರತೀಯರೇ ಇದ್ದಾರೆ. ಇದು ಭಾರತೀಯರ ಶ್ರೇಷ್ಠತೆ ಎಂದು ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು.


ಸನ್ಮಾನ
ಈ ಸಂದಭರ್ದಲ್ಲಿ ಕರ್ನಾಟಕ ಬ್ಯಾಂಕ್ ಕಾರ್ಕಳ ಶಾಖಾ ಪ್ರಬಂಧಕ ಗಿರೀಶ್ ನಾಯಕ್ ಮತ್ತು ತುಳುಕೂಟ ಮೂಡುಬಿದ್ರೆ ಇದರ ಸ್ಥಾಪಕಾಧ್ಯಕ್ಷ ಚಂದ್ರಹಾಸ ದೇವಾಡಿಗ, ವಿಶ್ವೇಶ್ವರಯ್ಯ ತಾಂತ್ರಿಕ ವಿ.ವಿ.ಯ ಸಿಂಡಿಕೇಟ್ ಸದಸ್ಯ ಮತ್ತು ವಕೀಲ ಎಂ.ಕೆ ಸುವ್ರತ್‌ಕುಮಾರ್ ಮತ್ತು ಹಿರ್ಗಾನ ಗ್ರಾ.ಪಂ. ಅಧ್ಯಕ್ಷ ಸಂತೋಷ್ ಶೆಟ್ಟಿ ಅವರನ್ನು ಗೌರವಿಸಲಾಯಿತು.
ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸ್ಥಾಪಕ ಸದಸ್ಯರಾದ ಡಾ. ಗಣನಾಥ ಶೆಟ್ಟಿ ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು. ಅನಘಾ ಮತ್ತು ಬಳಗದವರು ಪ್ರಾರ್ಥಿಸಿ,ಉಪನ್ಯಾಸಕರಾದ ರಾಜೇಶ್ ಶೆಟ್ಟಿ ಮತ್ತು ವಿನಾಯಕ್ ಜೋಗ್ ಬಹುಮಾನಿತ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ಸಂಸ್ಥಾಪಕರಾದ ಅಮೃತ್ ರೈ ಅಧ್ಯಕ್ಷತೆ ವಹಿಸಿದ್ದು, ಅಶ್ವಥ್ ಎಸ್.ಎಲ್, ಆದರ್ಶ ಎಂ.ಕೆ, ವಿಮಲ್‌ರಾಜ್ ಜಿ, ಗಣಪತಿ ಭಟ್ ಕೆ.ಎಸ್. ಹಾಗೂ ಪ್ರಾಂಶುಪಾಲ ವಿದ್ವಾನ್ ಗಣಪತಿ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕ ರಾಮಕೃಷ್ಣ ಹೆಗಡೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಕಾಲೇಜು ವಾರ್ಷಿಕೋತ್ಸವ
ದ್ವಿತೀಯ ದಿನದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಬಡ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳ ಉಚಿತ ಶಿಕ್ಷಣ ವ್ಯವಸ್ಥೆ ಕ್ರಿಯೇಟಿವ್ ಹೊಂಗಿರಣ ಯೋಜನೆಯನ್ನು ಉದ್ಘಾಟಿಸಿದ ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಕ್ರಿಯೇಟಿವ್‌ನಂತಹ ವಿದ್ಯಾ ಸಂಸ್ಥೆಗಳು ಸ್ಥಾಪನೆಯಾದಲ್ಲಿ ಅಂತಹ ಪ್ರದೇಶ ಅಭಿವೃದ್ಧಿ ಹೊಂದುವುದರ ಜೊತೆಗೆ ಶಿಕ್ಷಣ ಕ್ಷೇತ್ರದಲ್ಲೂ ಉತ್ತಮ ಬದಲಾವಣೆಯಾಗುತ್ತದೆ, ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭೆಗೆ ಮನ್ನಣೆ ದೊರೆಯುತ್ತದೆ ಎಂದರು. ಮುಖ್ಯ ಅತಿಥಿ ಡಾ. ನರೇಂದ್ರ ರೈ ದೇರ್ಲ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನ್ನಾಡುತ್ತಾ, ಸಾಹಿತ್ಯದ ಮಾನವಿಕ ಅಂಶ ಪ್ರತಿ ವಿದ್ಯಾರ್ಥಿಯ ಗುರಿಯಾಗಬೇಕು. ಸಹಜ ಬದುಕು ಬದುಕಲು ಮಾನವನ ದುರಾಸೆ ಬಿಡುತ್ತಿಲ್ಲ. ಮಾನವೀಯ ಮೌಲ್ಯಗಳೊಂದಿಗೆ ಜೀವಿಸಿ ಎಂದು ಕರೆ ನೀಡಿದರು. ವಿದ್ಯಾರ್ಥಿ ಜೀವನದಲ್ಲಿ ಕಲೆ ಸಾಹಿತ್ಯದೊಂದಿಗೆ ಒಡನಾಟ ಬೆಳೆಸಿಕೊಂಡು ಪರಿಸರ ಪ್ರೀತಿಯೊಂದಿಗೆ ಬದುಕಲು ಕಲಿಯೋಣ ಎಂದು ಆಶಿಸಿದರು. ಹಿರ್ಗಾನ ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಶೆಟ್ಟಿ ಮಾತನಾಡಿ ಪರಸ್ಪರ ಸಹಕಾರದ ಮೂಲಕ ಉತ್ತಮ ವಿದ್ಯಾಸಂಸ್ಥೆಯನ್ನು ಕಟ್ಟೋಣ ಎಂದು ಕರೆ ನೀಡಿದರು.

ಪ್ರತಿಭಾ ಪುರಸ್ಕಾರ
ಈ ಸಂದರ್ಭದಲ್ಲಿ ಕಳೆದ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಹಾಗೂ 2022ನೇ ಇಸವಿಯಲ್ಲಿ ಪ್ರತಿಷ್ಠತ ಸಂಸ್ಥೆಗಳಲ್ಲಿ ಕಾಲೇಜಿನಲ್ಲಿ 16 ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಪ್ರವೇಶ ಪಡೆದ 17 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಜಿಲ್ಲಾಮಟ್ಟದಿಂದ ರಾಜ್ಯ ತಂಡಕ್ಕೆ ಆಯ್ಕೆಯಾದ ಕ್ರೀಡಾ ಪ್ರತಿಭೆ ಲೇಖನಾ, ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದ ನಿಹಾರ್ ಭಟ್ ಮತ್ತು ಸುಮಂತ್ ಶೆಟ್ಟಿ, ಹಾಸನದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಪ್ರತಿಭಾ ಕಾರಂಜಿ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿದ ವಿದ್ಯಾರ್ಥಿ ಅಜಯ್ ಅವರನ್ನು ಗೌರವಿಸಲಾಯಿತು.
ಮೂರು ಮುತ್ತು ಕಲಾವಿದರಿಂದ ಹಾಸ್ಯ ನಾಟಕ
ಮುಂಜಾನೆ ಗಂಟೆ 10ಕ್ಕೆ ಕುಂದಾಪುರದ ಅಂತರಾಷ್ಟ್ರೀಯ ಖ್ಯಾತಿಯ ಮೂರು ಮುತ್ತು ಕಲಾವಿದರಿಂದ ಹಾಸ್ಯಮಯ ನಗೆನಾಟಕ ನಡೆಯಿತು. ಪ್ರಾಂಶುಪಾಲ ವಿದ್ವಾನ್ ಗಣಪತಿ ಭಟ್ ಸಂಸ್ಥೆಯ ವಾರ್ಷಿಕ ವರದಿ ವಾಚಿಸಿದರು. ಸಂಸ್ಥಾಪಕರಲ್ಲೊಬ್ಬರಾದ ಅಶ್ವತ್ ಎಸ್.ಎಲ್ ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿದರು. ಗಣಪತಿ ಭಟ್ ಕೆ.ಎಸ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿ, ಆದರ್ಶ ಎಂ.ಕೆ, ವಿಮಲ್‌ರಾಜ್. ಜಿ, ಅಮೃತ್ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಪನ್ಯಾಸಕ ಲೋಹಿತ್ ಎಸ್.ಕೆ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮ ನಿರ್ವಹಿಸಿದರು. ರಾಮಕೃಷ್ಣ ಹೆಗಡೆ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಕನ್ನಡ ಉಪನ್ಯಾಸಕ ಸತೀಶ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ವೇದಿಕೆಯಲ್ಲಿ ಭಾರತ ವೈಭವ ಪರಿಕಲ್ಪನೆಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.































































