ಲೆಮಿನ ಕ್ರಾಸ್‌ ಬಳಿ ಬಸ್‌ಗೆ ಟಿಪ್ಪರ್ ಡಿಕ್ಕಿ

ಕಾರ್ಕಳ : ನಿಟ್ಟೆ ಲೆಮಿನಾ ಕ್ರಾಸ ಬಳಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ಹಿಂಬದಿಯಿಂದ ಬರುತ್ತಿದ್ದ ಟಿಪ್ಪರ್ ಲಾರಿ ಡಿಕ್ಕಿಯಾಗಿದ್ದು, ಪ್ರಯಾಣಿಸುತ್ತಿದ್ದ ಇಬ್ಬರಿಗೆ ಗಾಯಗಳಾಗಿವೆ. ಇಂದು ಮಧ್ಯಾಹ್ನ ಈ ಅಪಘಾತ ಸಂಭವಿಸಿದ್ದು ಕಾರ್ಕಳದಿಂದ ಬೆಳ್ಮಣ್ ಕಡೆಗೆ ಹೋಗುತ್ತಿದ್ದ ಬಸ್ಸಿನ ಹಿಂದಿನಿಂದ ಬರುತ್ತಿದ್ದ ಟಿಪ್ಪರ್ ಲಾರಿ ಗುದ್ದಿರುವ ಪರಿಣಾಮ ಬಸ್ಸಿನ ಹಿಂಬದಿ ಸಂಪೂರ್ಣ ಜಖಂಗೊಂಡಿದ್ದು, ಬಸ್ಸಿನಲ್ಲಿದ್ದ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.





























































































































error: Content is protected !!
Scroll to Top