ಅಹ್ಮದಾಬಾದ್: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಾಯಿ ಹೀರಾಬೆನ್ ಮೋದಿ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದು, ತಾಯಿಯ ಪಾರ್ಥೀವ ಶರೀರವನ್ನು ಹೆಗಲ ಮೇಲೆ ಹೊತ್ತು ಅಂತಿಮ ಯಾತ್ರೆಯಲ್ಲಿ ಸಾಗಿದರು.
ಮೋದಿಯವರ ಸಹೋದರ ಪ್ರಹ್ಲಾದ್ ಮೋದಿಯವರ ಮನೆಯಿಂದ ಹೀರಾಬೆನ್ ಅವರ ಅಂತಿಮ ಯಾತ್ರೆ ಸಾಗಿದ್ದು, ಈ ವೇಳೆ ತಾಯಿಯ ಪಾರ್ಥೀವ ಶರೀರಕ್ಕೆ ಹೆಗಲುಕೊಟ್ಟು ಸಾಗಿದರು.
ತಾಯಿಯ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಎಲ್ಲ ಕಾರ್ಯಕ್ರಮಗಳನ್ನು ರದ್ದುಪಡಿಸಿ ಅಹ್ಮದಾಬಾದ್ಗೆ ತಲುಪಿದರು. ನಂತರ ತಾಯಿಯ ಅಂತಿಮ ದರ್ಶನ ಪಡೆದ ಮೋದಿಯವರು, ಕಾಲಿಗೆ ನಮಸ್ಕರಿಸಿ ಪಾರ್ಥೀವ ಶರೀರಕ್ಕೆ ಹೆಗಲುಕೊಟ್ಟು ನಡೆದರು.
ತಾಯಿಯ ಪಾರ್ಥಿವಕ್ಕೆ ಹೆಗಲುಕೊಟ್ಟ ಮೋದಿ






























































