ಬಸ್ಸಿಗೆ ಕಾರು ಡಿಕ್ಕಿ : 4 ಸಾವು

ಹೊಸ ವರ್ಷದ ಪಾರ್ಟಿ ಮುಗಿಸಿ ಗೋವಾದಿಂದ ಹಿಂದಿರುಗುವಾಗ ಅಪಘಾತ

ಅಂಕೋಲ : ಉತ್ತರ ಕನ್ನಡ ಜಿಲ್ಲೆಯ ಅಂಕೋಲ ಬಳಿ ಸಾರಿಗೆ ಬಸ್‍ಗೆ ಕಾರು ಡಿಕ್ಕಿಯಾಗಿ ತಮಿಳುನಾಡು ಮೂಲದ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಅಂಕೋಲ ತಾಲೂಕಿನ ಬಾಳೆಗುಳಿ ಕ್ರಾಸ್ ಬಳಿ ಭಾನುವಾರ ರಾತ್ರಿ ಎದುರಿನಿಂದ ಬರುತ್ತಿದ್ದ ಸಾರಿಗೆ ಸಂಸ್ಥೆಯ ಬಸ್‍ಗೆ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಪ್ರವಾಸಿಗರು ಮೃತಪಟ್ಟಿದ್ದಾರೆ.
ಮೃತರನ್ನು ತಮಿಳುನಾಡು ಮೂಲದ ಅರುಣ್ ಪಾಂಡ್ಯನ್, ನಿಫುಲ್, ಮಹ್ಮದ್ ಬಿಲ್ಲಾಲ್ ಮತ್ತು ಶೇಖರನ್ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಮತ್ತೊಬ್ಬ ಪ್ರವಾಸಿಗ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೊಸ ವರ್ಷಾಚರಣೆ ನಿಮಿತ್ತ ಗೋವಾಕ್ಕೆ ತೆರಳಿದ್ದ ಈ ಪ್ರವಾಸಿಗರು ಅಲ್ಲಿಂದ ಗೋಕರ್ಣಕ್ಕೆ ತೆರಳುತ್ತಿದ್ದರು. ಹೆದ್ದಾರಿ ಮಧ್ಯದ ವಿಭಜಕಕ್ಕೆ ಬಡಿದು ತದಡಿಯಿಂದ ಹುಬ್ಬಳ್ಳಿಯತ್ತ ಸಂಚರಿಸುತ್ತಿದ್ದ ಬಸ್‍ಗೆ ಡಿಕ್ಕಿಯಾಗಿದೆ ಎಂದು ಅಂಕೋಲ ಪೊಲೀಸರು ತಿಳಿಸಿದ್ದಾರೆ.







































































































































error: Content is protected !!
Scroll to Top