ಜ.16-17 : ದಿಲ್ಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ

ಜೆ.ಪಿ.ನಡ್ಡಾ ಅಧ್ಯಕ್ಷರಾಗಿ ಮರು ಆಯ್ಕೆ ಸಾಧ್ಯತೆ

ಹೊಸದಿಲ್ಲಿ : ಬಿಜೆಪಿಯ ಮಹತ್ವದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಜ.16, 17 ರಂದುನಡೆಯಲಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತೊಂದು ಅವಧಿಗೆ ಪುನರಾಯ್ಕೆಯಾಗುವ ಸಾಧ್ಯತೆಗಳಿವೆ.
ಮುಂಬರುವ ವಿಧಾನಸಭಾ ಚುನಾವಣೆಗಳು ಹಾಗೂ 2024 ರ ಲೋಕಸಭಾ ಚುನಾವಣೆಗಳ ತಯಾರಿ ಹಾಗೂ ಕಾರ್ಯತಂತ್ರಗಳ ಬಗ್ಗೆ ಸಭೆಯಲ್ಲಿ ಮಹತ್ವದ ಚರ್ಚೆ, ನಿರ್ಧಾರಗಳಾಗಲಿವೆ. ಪ್ರಧಾನಿ ನರೇಂದ್ರ ಮೋದಿ ಸೇರಿ, ದೇಶಾದ್ಯಂತ ಇರುವ ಪಕ್ಷದ ಹಿರಿಯ ನಾಯಕರು ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಭಾಗವಹಿಸಲಿದ್ದಾರೆ.
ಕಾಂಗ್ರೆಸ್‌ನ ಭಾರತ್ ಜೋಡೊ ಯಾತ್ರೆ ಹಾಗೂ ಅದು ಪ್ರಸ್ತಾಪಿಸುತ್ತಿರುವ ದ್ವೇಷ ಹಾಗೂ ವಿಭಜನೆ ಅಜೆಂಡಾಗೆ ಬಿಜೆಪಿ ಪ್ರಬಲ ಪ್ರತಿತಂತ್ರ ಹೆಣೆಯುವುದು ಹಾಗೂ ವಿಪಕ್ಷಗಳ ಬಗ್ಗೆ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. ಭಾರತ ಜಿ-20 ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದು ದೇಶಾದ್ಯಂತ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಬಗ್ಗೆಯೂ ಚರ್ಚೆ ನಡೆಸಲಾಗುತ್ತದೆ.











































error: Content is protected !!
Scroll to Top