ಹೊಸದಿಲ್ಲಿ : ಭಾರತ್ ಸಂಚಾರ್ ನಿಗಮ ಲಿಮಿಟೆಡ್ 11,705 ಜೂನಿಯರ್ ಟೆಲಿಕಾಂ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಭಾರತ್ ಸಂಚಾರ ನಿಗಮ ಲಿಮಿಟೆಡ್ನ ವೆಬ್ಸೈಟ್ bsnl.co.inಗೆ ಭೇಟಿ ನೀಡಬೇಕು.
ಹುದ್ದೆಗಳ ಹೆಸರು ಮತ್ತು ಸಂಖ್ಯೆ: ಜೂನಿಯರ್ ಟೆಲಿಕಾಂ ಆಫೀಸರ್- 11,705 ಹುದ್ದೆಗಳು
ಶೈಕ್ಷಣಿಕ ಅರ್ಹತೆ: ದೂರಸಂಪರ್ಕ/ ಎಲೆಕ್ಟ್ರಾನಿಕ್ಸ್/ ರೇಡಿಯೊ/ ಕಂಪ್ಯೂಟರ್/ ಎಲೆಕ್ಟ್ರಿಕಲ್/ ಐಟಿ/ ಇನ್ಸ್ಟ್ರುಮೆಂಟೇಶನ್ ಎಂಜಿನಿಯರಿಂಗ್ನಲ್ಲಿ ಬಿ.ಇ ಅಥವಾ ಬಿ.ಟೆಕ್, ಎಲೆಕ್ಟ್ರಾನಿಕ್ಸ್/ ಸಿಎಸ್ಇಯಲ್ಲಿ ಎಂ.ಎಸ್ಸಿ ಪದವಿಯನ್ನು ಮಾಡಿರಬೇಕು.
ವಯೋಮಿತಿ : 20 ವರ್ಷದಿಂದ 30 ವರ್ಷಗಳವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್ಸಿ/ ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಗೆ ಆಹ್ವಾನಿಸಲಾಗುತ್ತದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಶಾರ್ಟ್ಲಿಸ್ಟ್ ಮಾಡಿ ನೇರ ಸಂದರ್ಶನಕ್ಕೆ ಕರೆಯಲಾಗುತ್ತದೆ. ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸ ಬಯಸುವವರು ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲಾತಿಯೊಂದಿಗೆ Registered Office- BSNL, New Delhi ಇಲ್ಲಿಗೆ ವಿಳಾಸಕ್ಕೆ ಕಳುಹಿಸಬೇಕಾಗುತ್ತದೆ.
ಕೊನೆಯ ದಿನಾಂಕ: ಜನವರಿ 31, 2023.
ವೆಬ್ಸೈಟ್ bsnl.co.in






























































