ಬೆಳ್ಮಣ್ಣು : ಮಂಡಲ ಪೂಜಾ ಮಹೋತ್ಸವ

ಕಾರ್ಕಳ : ಶ್ರೀ ವನದುರ್ಗೆ ಕ್ಷೇತ್ರವೆಂದೇ ಪ್ರಸಿದ್ಧಿ ಪಡೆದಿರುವ ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಮಂಡಲ ಪೂಜಾ ಮಹೋತ್ಸವವು ಜ. 4 ರಂದು ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರ ವೇದಮೂರ್ತಿ ಬಿ. ಕೆ. ವಿಘ್ನೇಶ್ ಭಟ್ ಅವರ ನೇತೃತ್ವದಲ್ಲಿ ಜರಗಿತು. ಬೆಳಿಗ್ಗೆ ಪಂಚಾಮೃತಾಭಿಷೇಕ, ನವಕ ಕಲಶಾಭಿಷೇಕ, ಅಲಂಕಾರ ಪೂಜೆ, ತುಲಾಭಾರ ಸೇವೆ, ಮಧ್ಯಾಹ್ನ ಮಹಾಪೂಜೆ, ಮಂಡಲ ಪೂಜೆ, ಉತ್ಸವ ಬಲಿ, ಪಲ್ಲ ಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಯಕ್ಷಗಾನ ತಾಳಮದ್ದಲೆ ಶರಸೇತು ಬಂಧ ಹಾಗೂ ಕಲ್ಲಡ್ಕ ವಿಠಲ ನಾಯಕ್ ಅವರಿಂದ ವಿನೂತನ ಶೈಲಿಯ ಜೀವನ ಸಂದೇಶ ನೀಡುವ ಗೀತಾ ಸಾಹಿತ್ಯ ಸಂಭ್ರಮ ಕಾರ್ಯಕ್ರಮ ಜರಗಿತು. ರಾತ್ರಿ ಪ್ರಸನ್ನ ಪೂಜೆ, ಉತ್ಸವ ಬಲಿ ಹಾಗೂ ರಂಗಪೂಜೆ ಜರಗಿತು.





























































































































error: Content is protected !!
Scroll to Top