ಹಿರ್ಗಾನ : ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಕಾರ್ಕಳ : ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜ. 5 ರಂದು ಹಿರ್ಗಾನದಲ್ಲಿ ಸಂಭವಿಸಿದೆ. ಕುಂದೇಶ್ವರ ನಿವಾಸಿ ಸಂಪತ್‌ ಭಂಡಾರಿ (30) ಎಂಬುವವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮೃತರು ಬುಧವಾರ ಸಂಜೆಯಿಂದ ನಾಪತ್ತೆಯಾಗಿದ್ದು, ಗುರುವಾರ ಬೆಳಗ್ಗೆ ಮನೆಯ ಮುಂಭಾಗದಲ್ಲಿರುವ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸಾಲಭಾದೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಕುರಿತು ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.





























































































































error: Content is protected !!
Scroll to Top