ಕಾರ್ಕಳ : ಶ್ರೀ ಗುರುಕುಲ ವಿದ್ಯಾವರ್ಧಕ ಸಂಘದಿಂದ ನಡೆಸಲ್ಪಡುವ ಮಾಳ ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಮತ್ತು ಅಭಿನಂದನಾ ಸಮಾರಂಭ ಜ. 7 ರಂದು ಜರಗಲಿದೆ. ಅಂದು ಬೆಳಗ್ಗೆ 9:30 ಗಂಟೆಗೆ ಧ್ವಜಾರೋಹಣ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದ್ದು, ಸಂಜೆ 7 ಗಂಟೆಯಿಂದ ಸಭಾ ಕಾರ್ಯಕ್ರಮ ಜರಗಲಿದೆ. ಡಾ. ಕಲ್ಲಡ್ಕ ಪ್ರಭಾಕರ ಭಟ್ ದಿಕ್ಸೂಚಿ ಭಾಷಣ ಮಾಡಲಿದ್ದು, ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ಎಂ. ಪ್ರಭಾಕರ ಜೋಶಿಯವರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ ಎಂದು ಸಂಸ್ಥೆ ಪ್ರಕಟನೆಯಲ್ಲಿ ತಿಳಿಸಿದೆ.
ಜ. 7 : ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ






























































