ಕಾರ್ಕಳ : ಇಂಡಿಯನ್ ಸ್ಕೂಲ್ ಗೇಮ್ಸ್ ಸ್ಪೋರ್ಟ್ಸ್ ಫೌಂಡೇಶನ್ ವತಿಯಿಂದ ಡಿ. 26 ರಿಂದ 28 ರವೆರೆಗೆ ಅಂಡಮಾನ್ ನಿಕೋಬಾರ್ ದ್ವೀಪದಲ್ಲಿ ನಡೆದ 19 ವಯೋಮಿತಿಯೊಳಗಿನ ಅಂತರಾಷ್ಟ್ರೀಯ ಮಟ್ಟದ ಯೋಗ ಚಾಂಪಿಯನ್ ಶಿಪ್‌ನಲ್ಲಿ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ನಿಧಿ ಯು. ಆಚಾರ್ ಭಾರತವನ್ನು ಪ್ರತಿನಿಧಿಸಿ ಪ್ರಥಮ ಸ್ಥಾನಿಯಾಗಿ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಇವರು ಕಾರ್ಕಳದ ಉದಯ್ ಆಚಾರ್ ಮತ್ತು ಲಲಿತಾ ದಂಪತಿ ಪುತ್ರಿ. ಅಂತರಾಷ್ಟ್ರೀಯ ಯೋಗ ಗುರು ನರೇಂದ್ರ ಕಾಮತ್ ಅವರಿಂದ ಯೋಗ ತರಬೇತಿ ಪಡೆಯುತ್ತಿದ್ದಾರೆ. ಕಾಲೇಜಿನ ಪ್ರಾಂಶುಪಾಲ ವಿದ್ವಾನ್ ಗಣಪತಿ ಭಟ್, ಆಡಳಿತ ಮಂಡಳಿ, ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದ ವಿಜೇತ ವಿದ್ಯಾರ್ಥಿನಿಯನ್ನು ಅಭಿನಂದಿಸಿದ್ದಾರೆ.
ಕ್ರಿಯೇಟಿವ್ ಕಾಲೇಜಿನ ನಿಧಿ ಯು. ಆಚಾರ್ ಅಂತರಾಷ್ಟ್ರೀಯ ಮಟ್ಟದ ಯೋಗ ಸ್ಪರ್ಧೆಯಲ್ಲಿ ಪ್ರಥಮ




















