ಬೈಕ್‌ಗೆ ರಿಕ್ಷಾ ಡಿಕ್ಕಿ : ಸವಾರನಿಗೆ ಗಂಭೀರ ಗಾಯ

ಕಾರ್ಕಳ: ರಿಕ್ಷಾ ಬೈಕಿಗೆ ಡಿಕ್ಕಿ ಹೊಡೆದು ಬೈಕ್‌ ಸವಾರ ಶಿವಪ್ಪ ಕುಲಾಲ್‌ ಎಂಬವರು ಗಂಭೀರವಾಗಿ ಗಾಯಗೊಂಡ ಘಟನೆ ಕಕ್ಕುಂದೂರು ಗ್ರಾಮದ ಜೋಡುರಸ್ತೆ ಬಳಿ ಜ.4 ರಂದು ಸಂಜೆ ಸಂಭವಿಸಿದೆ. ಚಿಂಗ ಎಂಬಾತ ಇನ್ನೊಂದು ವಾಹನವನ್ನು ಓವರ್‌ಟೇಕ್‌ ಮಾಡುವ ಭರದಲ್ಲಿ ರಿಕ್ಷಾವನ್ನು ತೀರಾ ಎಡಬದಿಗೆ ಚಲಾಯಿಸಿದ ಪರಿಣಾಮವಾಗಿ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಬೈಕ್‌ ಸಮೇತ ರಸ್ತೆಗೆ ಬಿದ್ದ ಶಿವಪ್ಪ ಕುಲಾಲ್‌ ಅವರ ತಲೆಯ ಹಿಂಬದಿಗೆ ಗಂಭೀರ ಸ್ವರೂಪದ ಗಾಯವಾಗಿದೆ. ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಕುರಿತು ರಿಕ್ಷಾ ಚಾಲಕ ಮಹಮ್ಮದ್‌ ಹನೀಫ ಎಂಬವರು ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

















































error: Content is protected !!
Scroll to Top