ದೆಹಲಿಯಲ್ಲಿ ಗಣರಾಜ್ಯೋತ್ಸವ ಪರೇಡ್‍: ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅನುಮತಿ ನಿರಾಕರಿಸಿದ ಕೇಂದ್ರ ಸರಕಾರ

ಬೆಂಗಳೂರು: ಪ್ರತಿ ವರ್ಷ ಜ.26ರಂದು ದೆಹಲಿಯ ರಾಜಪಥ್‍ನಲ್ಲಿ ನಡೆಯುವ ಗಣರಾಜ್ಯೋತ್ಸವ ದಿನಾಚರಣೆಯ ಪರೇಡ್‍ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ ಪ್ರದರ್ಶನ ಮಾಡಲಾಗುತ್ತಿತ್ತು. ಆದರೆ ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಸ್ಥಬ್ದ ಚಿತ್ರ ಇರಲ್ಲ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹರ್ಷ ಮಾಹಿತಿ ನೀಡಿದ್ದಾರೆ.

ಕಳೆದ 13 ವರ್ಷಗಳಿಂದ ಕರ್ನಾಟಕದ ಸ್ತಬ್ಧಚಿತ್ರ ದೆಹಲಿಯ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಭಾಗವಹಿಸುತ್ತಾ ಇತ್ತು. ಆದರೆ ಈ ಬಾರಿ ಬೇರೆ ರಾಜ್ಯಗಳಿಗೆ ಅವಕಾಶ ನೀಡುವ ಹಿನ್ನಲೆ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಕೇಂದ್ರದಿಂದ ಅನುಮತಿ ಸಿಗಲಿಲ್ಲ. ಅಂತಿಮ ಹಂತದಲ್ಲಿ ರಾಜ್ಯಗಳ ಆಯ್ಕೆಯಲ್ಲಿ ಅನುಮತಿ ನಿರಾಕರಿಸಲಾಗಿದೆ. ಕರ್ನಾಟಕ ಕಳೆದ ಬಾರಿ ಎರಡನೇ ಪ್ರಶಸ್ತಿ ಪಡೆದಿತ್ತು. ಈ ಬಾರಿ ಮಹಿಳಾ ಸಬಲೀಕರಣ ಥೀಮ್ ರೆಡಿ ಮಾಡಿದ್ದೆವು, ಆದರೆ ಕೇಂದ್ರ ಸರಕಾರದಿಂದ ಅನುಮತಿ ಸಿಕ್ಕಿಲ್ಲ ಎಂದು ಹರ್ಷ ತಿಳಿಸಿದ್ದಾರೆ.

ತಮಿಳುನಾಡು, ಕೇರಳ ಸೇರಿ ಈ ಬಾರಿ ಒಟ್ಟು 13 ರಾಜ್ಯಗಳ ಸ್ತಬ್ಧಚಿತ್ರಗಳನ್ನು ಆಯ್ಕೆ ಮಾಡಲಾಗಿದೆ. ಅಂತಿಮ ಹಂತದಲ್ಲಿ ಕರ್ನಾಟಕ ಸ್ತಬ್ಧ ಚಿತ್ರಕ್ಕೆ ಅವಕಾಶ ನಿರಾಕರಣೆ ಮಾಡಲಾಗಿದೆ. ಈ ವರ್ಷ ನಾರಿ ಶಕ್ತಿ ಸ್ತಬ್ಧ ಚಿತ್ರ ಕರ್ನಾಟಕದಿಂದ ಫೈನಲ್ ಆಗಿತ್ತು. ಸಾಲುಮರದ ತಿಮ್ಮಕ್ಕ, ಸೂಗಿಗಿತ್ತಿ ನರಸಮ್ಮರ ಸ್ತಬ್ಧ ಚಿತ್ರ ಫೈನಲ್ ಆಗಿತ್ತು. ಒಟ್ಟು ನಾಲ್ಕು ವಿಷಯಗಳನ್ನು ರಾಜ್ಯ ಪ್ರಸ್ತುತಪಡಿಸಿದ್ದು, ನಾರಿ ಶಕ್ತಿ ಸ್ತಬ್ಧಚಿತ್ರ ಕಲ್ಪನೆಗೆ ಮೆಚ್ಚುಗೆ ವ್ಯಕ್ತವಾಗಿತ್ತು. ಆದರೆ ಅಂತಿಮ ಹಂತದ ಸಭೆಯಲ್ಲಿ ಕರ್ನಾಟಕ ಸ್ತಬ್ಧಚಿತ್ರ ರಿಜೆಕ್ಟ್ ಆಗಿದೆ.











































error: Content is protected !!
Scroll to Top