ಶ್ರೀ ರಾಮಸೇನೆ ನಾಯಕನ ಮೇಲೆ ಗುಂಡಿನ ದಾಳಿ

ರಸ್ತೆ ಹಂಪ್‌ನಲ್ಲಿ ಕಾರು ನಿಧಾನವಾದಾಗ ದಾಳಿ

ಬೆಳಗಾವಿ : ಶ್ರೀ ರಾಮ ಸೇನೆಯ ಬೆಳಗಾವಿ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಮೇಲೆ ಹಿಂಡಲಗಾ ಗ್ರಾಮದ ಬಳಿ ಬೈಕ್‌ನಲ್ಲಿ ಬಂದ ಇಬ್ಬರು ಗುಂಡಿನ ದಾಳಿ ನಡೆಸಿದ್ದು ರವಿ ಕೋಕಿತಕರ್ ಮತ್ತು ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಿಂಡಲಗಾ ಗ್ರಾಮದ ಬಳಿ ರೋಡ್ ಹಂಪ್‌ನಲ್ಲಿ ಕಾರು ನಿಧಾನ ಮಾಡಿದಾಗ ದುಷ್ಕರ್ಮಿಗಳು ಗುಂಡು ಹಾರಿಸಿದ್ದರು. ಗುಂಡು ರವಿ ಗದ್ದಕ್ಕೆ ತಗುಲಿ ನಂತರ ಚಾಲಕನ ಕೈಗೆ ತಗಲಿದೆ. ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಈ ಘಟನೆಯನ್ನು ಶ್ರೀ ರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ತೀವ್ರವಾಗಿ ಖಂಡಿಸಿದ್ದು ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. ಈ ಘಟನೆಯನ್ನು ಖಂಡಿಸಿ ನಾಳೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ.
ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ಡಿಸಿಪಿ ರವೀಂದ್ರ ಗಡಾದಿ, ನಗರ ಪೊಲೀಸ್ ಆಯುಕ್ತ ಬೋರಲಿಂಗಯ್ಯ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಖಾಸಗಿ ಆಸ್ಪತ್ರೆ ಬಳಿ ಒಂದು ಕೆಎಸ್‌ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿದೆ. ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.











































error: Content is protected !!
Scroll to Top