ಸಿದ್ದು ನಿಜ ಕನಸುಗಳು ಪುಸ್ತಕ ಬಿಡುಗಡೆಗೆ ಕೋರ್ಟ್‌ನಿಂದ ತಡೆ

ಬೆಂಗಳೂರು: ಸಿದ್ದು ನಿಜ ಕನಸುಗಳು ಪುಸ್ತಕ ಬಿಡುಗಡೆಗೆ ಸಿಟಿ ಸಿವಿಲ್ ಕೋರ್ಟ್ ಮಧ್ಯಂತರ ತಡೆ ನೀಡಿದೆ. ಸಿದ್ದು ನಿಜ ಕನಸುಗಳು ಪುಸ್ತಕವನ್ನು ಇಂದು ನಗರದ ಟೌನ್ ಹಾಲ್ ನಲ್ಲಿ ಬಿಡುಗಡೆ ಮಾಡಲು ಬಿಜೆಪಿ ಸಿದ್ಧತೆ ನಡೆಸಿತ್ತು. ಆದರೆ, ಇದಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಈ ಸಂಬಂಧ ಡಾ. ಯತೀಂದ್ರ ಸಿದ್ದರಾಮಯ್ಯ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನಗರದ 60ನೇ ಸಿಸಿಹೆಚ್ ನ್ಯಾಯಾಲಯ ಪುಸ್ತಕ ಬಿಡುಗಡೆಗೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಪ್ರತಿವಾದಿಗಳಾಗಿಸಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಮತ್ತಿತರರಿಗೆ ನೋಟಿಸ್ ಜಾರಿಗೊಳಿಸಿದೆ.

ಕೋಲಾರದಿಂದ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ – ಸಿದ್ದರಾಮಯ್ಯ
ಕೋಲಾರ: ಕೊನೆಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸಲಿರುವ ಕ್ಷೇತ್ರವನ್ನು ಬಹಿರಂಗಪಡಿಸಿದ್ದು, ಈ ಬಾರಿ ಕೋಲಾರದಿಂದಲೇ ಕಣಕ್ಕಿಳಿಯುವುದಾಗಿ ಸೋಮವಾರ ಅಧಿಕೃತವಾಗಿ ಘೋಷಿಸಿದ್ದಾರೆ. ಇಂದು ನಗರದ ಮಿನಿ ಕ್ರೀಡಾಂಗಣದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಿಂದಲೇ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ. ಆದರೆ ಪಕ್ಷದ ನಿರ್ಧಾರ ಅಂತಿಮವಾಗಲಿದೆ ಎಂದರು.











































error: Content is protected !!
Scroll to Top