ಕಾರ್ಕಳ : ಉಡುಪಿಯ ಉನ್ನತಿ ಕೆರಿಯರ್ ಅಕಾಡೆಮಿ ಯುವ ಜನತೆಗೆ ಉದ್ಯೋಗವಕಾಶವನ್ನು ಸೃಷ್ಟಿಸುವ ನಿಟ್ಟಿನಲ್ಲಿ ಜನವರಿ 12ರಂದು ರಾಷ್ಟ್ರೀಯ ಯುವ ದಿವಸದ ಅಂಗವಾಗಿ ಉಚಿತ ಮಾಸಿಕ ಉನ್ನತಿ ಉದ್ಯೋಗ ಮೇಳಕ್ಕೆ ಚಾಲನೆ ನೀಡಲಿದೆ. ಈ ಮೇಳವು ಜನವರಿ 2023ರಿಂದ ಜನವರಿ 2024ರ ವರೆಗೆ ನಡೆಯಲಿದ್ದು, ಪ್ರತಿ ತಿಂಗಳ ಎರಡನೇ ಗುರುವಾರದಂದು ಸಂಸ್ಥೆಯ ಕಚೇರಿಯಲ್ಲಿ ನೇರ ಅಥವಾ ಆನ್ ಲೈನ್ ಸಂದರ್ಶನದ ಮೂಲಕ ಜರುಗಲಿದೆ. ಭಾಗವಹಿಸುವವರು http://www.unnathijobs.com ಮೂಲಕ ಉಚಿತವಾಗಿ ನೋಂದಣಿ ಮಾಡಿಕೊಳ್ಳಬಹುದು.
ಸ್ಥಳೀಯ ಹಾಗೂ ದೇಶ-ವಿದೇಶಗಳ ಐಟಿ, ಬ್ಯಾಂಕಿಂಗ್, ಹಾಸ್ಪಿಟಲಿಟಿ, ಟೂರಿಸಮ್, ಮ್ಯಾನುಫ್ಯಾಕ್ಚರಿಂಗ್, ರೀಟೇಲ್ ಕ್ಷೇತ್ರದ ಪ್ರತಿಷ್ಠಿತ ಕಂಪೆನಿಗಳು ಈ ಮೇಳಗಳಲ್ಲಿ ಭಾಗವಹಿಸಲಿದ್ದು, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ, ಇಂಜಿನೀಯರಿಂಗ್, ಎಂಬಿಎ ಮುಗಿಸಿರುವ ಅಭ್ಯರ್ಥಿಗಳಿಗೆ ನಿಶುಲ್ಕವಾಗಿ ನೇಮಕಾತಿ ಪಡೆಯುವ ಅವಕಾಶವನ್ನು ಸಂಸ್ಥೆಯು ಒದಗಿಸುತ್ತಿದೆ. ನೋಂದಣಿ ಮಾಡಿರುವ ಅಭ್ಯರ್ಥಿಗಳಿಗೆ ಸಂಸ್ಥೆಯು ಸಂದರ್ಶನ ಎದುರಿಸುವ ಬಗ್ಗೆ ಒಂದು ದಿನದ ಉಚಿತ ತರಬೇತಿಯನ್ನೂ ನೀಡಲಿದ್ದು, ಹೆಚ್ಚಿನ ಮಾಹಿತಿಗಾಗಿ 8762803324 ಗೆ ಸಂಪರ್ಕಿಸಬಹುದು ಅಥವಾ ಪಿಪಿಸಿ 1ನೇ ಅಡ್ಡರಸ್ತೆಯಲ್ಲಿರುವ ಸಂಸ್ಥೆಯ ಕಚೇರಿಗೆ ಭೇಟಿ ನೀಡಬಹುದು ಎಂದು ಸಂಸ್ಥೆಯ ಸ್ಥಾಪಕ ಪ್ರೇಮ್ ಪ್ರಸಾದ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





















