ರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮ
ಬೆಂಗಳೂರು : ರಾಷ್ಟ್ರೀಯ ಯುವ ಜನೋತ್ಸವದಲ್ಲಿ ಭಾಗವಹಿಸುವ ಸಲುವಾಗಿ ಪ್ರಧಾನಿ ಮೋದಿಯವರು ಗುರುವಾರ ಮಧ್ಯಾಹ್ನ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ.
ಏಳು ದಿನ ನಡೆಯಲಿರುವ ರಾಷ್ಟ್ರೀಯ ಯುವ ಜನೋತ್ಸವದಲ್ಲಿ ದೇಶದ 28 ರಾಜ್ಯಗಳಿಂದ ಹಾಗೂ 8 ಕೇಂದ್ರೀಯ ಪ್ರಾಂತ್ಯದಿಂದ ಯುವಜನರು ಪಾಲ್ಗೊಳ್ಳುತ್ತಿದ್ದಾರೆ. ಪ್ರಧಾನಿ ಮೋದಿಯವರು ಈ ಕಾರ್ಯಕ್ರಮವನ್ನು ಭಾಗವಹಿಸಿ ಹಿಂದಿರುಗಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. .
ಜನವರಿ 19 ರಂದು ಪ್ರಧಾನಿ ಮೋದಿಯವರು ನಾರಾಯಣಪುರಕ್ಕೆ ಆಗಮಿಸಲಿದ್ದು, ಕೇಂದ್ರ ಹಾಗೂ ರಾಜ್ಯ ಅನುದಾನಿತ ನಾರಾಯಣಪುರ ಎಡದಂಡೆ ಕಾಲುವೆ (ಎನ್ಎಲ್ಬಿಸಿ) ಆಧುನೀಕರಣದ ಯೋಜನೆಯನ್ನು ರಾಷ್ಟ್ರಕ್ಕೆ ಸಮರ್ಪಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಗುಲ್ಬರ್ಗಾದಲ್ಲಿ ಬಂಜಾರ ಸಮಾವೇಶ ನಡೆಸುವ ಯೋಜನೆಯಿದ್ದು, ಪ್ರಧಾನಿ ಮೋದಿಯವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಗ್ಗೆ ಇನ್ನೂ ನಿಶ್ಚಯವಾಗಿಲ್ಲ ಎಂದು ತಿಳಿಸಿದರು.





















