ರೈಲು ನಿಲ್ದಾಣದಲ್ಲಿ ಕುಸಿದು ಬಿದ್ದು ಸ್ವಾಮೀಜಿ ದೇಹಾಂತ್ಯ

ಯಾದಗಿರಿ ಜಿಲ್ಲೆಯ ಶಹಾಪುರ‌ ತಾಲೂಕಿನ ದೋರನಹಳ್ಳಿಯ ಹಿರೇಮಠದ ಸ್ವಾಮೀಜಿ

ಬೆಂಗಳೂರು: ಯಾದಗಿರಿ ಜಿಲ್ಲೆಯ ಶಹಾಪುರ‌ ತಾಲೂಕಿನ ದೋರನಹಳ್ಳಿಯ ಹಿರೇಮಠದ ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ ಬುಧವಾರ ರಾತ್ರಿ ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದಲ್ಲಿ ದಿಢೀರ್ ಕುಸಿದು ಬಿದ್ದು ಹೃದಯಾಘಾತದಿಂದ ಅಸ್ತಂತರಾಗಿದ್ದಾರೆ.
ತಮ್ಮ 25ನೇ ಪಟ್ಟಾಧಿಕಾರ ಮಹೋತ್ಸವ ಕಾರ್ಯಕ್ರಮಕ್ಕೆ ಗಣ್ಯರನ್ನು ಆಹ್ವಾನಿಸಲು ಬೆಂಗಳೂರಿಗೆ ಆಗಮಿಸಿದ್ದರು.
ವಾಪಸ್ ಯಾದಗಿರಿಗೆ ಹೋಗಲು ಬೆಂಗಳೂರಿನ ಕಂಟೋನ್ಮೆಂಟ್ ರೈಲು ನಿಲ್ದಾಣಕ್ಕೆ ಆಗಮಿಸಿದ ವೇಳೆ ನಡೆದುಕೊಂಡು ಹೋಗುತ್ತಿರುವಾಗಲೇ ಸ್ವಾಮೀಜಿ ಕುಸಿದು ಬಿದ್ದಿದ್ದಾರೆ. ಭಕ್ತರು ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಿದರು. ಆದರೆ, ಸ್ವಾಮೀಜಿ ಮಾರ್ಗಮಧ್ಯೆಯೇ ಇಹಲೋಕ ತ್ಯಜಿಸಿದರು.
ಶಹಪೂರ ತಾಲೂಕಿನ ದೋರನಹಳ್ಳಿ ಹಿರೇಮಠವು ರಂಭಾಪುರಿ ಪೀಠದ ಶಾಖಾ ಮಠವಾಗಿದ್ದು, ಇತಿಹಾಸ ಮತ್ತು ಪರಂಪರೆ ಹೊಂದಿದೆ.

















































error: Content is protected !!
Scroll to Top