ಕಟೀಲ್‌ ಹೇಳಿಕೆ ಹಾಸ್ಯಾಸ್ಪದ : ಮಮತಾ ಗಟ್ಟಿ

ಕಾಂಗ್ರೆಸ್‌ ಪ್ರಜಾಧ್ವನಿ ಯಾತ್ರೆ ಪೂರ್ವಭಾವಿ ಸಭೆ

ಕಾರ್ಕಳ: ಸಂಕಷ್ಟದ ಸಮಯದಲ್ಲಿ ನಮ್ಮೊಂದಿಗಿರುವವರು ಪಕ್ಷದ ನಿಜವಾದ ಸೈನಿಕರು. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿಂದೂ ಕಾರ್ಯಕರ್ತರು ಸಿಗುವುದಿಲ್ಲ ಎಂದಿರುವ ಮೊದಲು ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ಹಾಸ್ಯಾಸ್ಪದ. ಇಂಥ ಅಪ್ರಬುದ್ಧ ಹೇಳಿಕೆಗಳನ್ನು ನಮ್ಮ ಕಾರ್ಯಕರ್ತರು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾರ್ಕಳ ಉಸ್ತುವಾರಿ ಮಮತಾ ಗಟ್ಟಿ ಹೇಳಿದ್ದಾರೆ.
ಕಾಂಗ್ರೆಸ್ ಕಛೇರಿಯಲ್ಲಿ ಕೆಪಿಸಿಸಿ ಹಮ್ಮಿಕೊಂಡ ಪ್ರಜಾಧ್ವನಿ ಕಾರ್ಯಕ್ರಮದ ಪೂರ್ವ ತಯಾರಿಯ ಬಗ್ಗೆ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಆಯೋಜಿಸಿದ್ದ ಕಾರ್ಯಕರ್ತರು ಹಾಗೂ ಪಕ್ಷ ಪ್ರಮುಖರ ಸಭೆಯಲ್ಲಿ ಅವರು ಮಾತನಾಡಿದರು.
ಕಾರ್ಕಳ ವಿಧಾನ ಸಭಾಕ್ಷೇತ್ರದ ಒಟ್ಟು 1,86,500 ಮತದಾರರಲ್ಲಿ 97 ಸಾವಿರಕ್ಕೂ ಹೆಚ್ಚು ಮಹಿಳೆಯರಿದ್ದು, ಬಿಜೆಪಿಯ ಮಹಿಳಾ ವಿರೋಧಿ ಮನುವಾದಿ ಮನಸ್ಥಿತಿಯ ಕಾರಣವಾಗಿ ಅವರು ಕಾಂಗ್ರೆಸ್ಸಿನತ್ತ ಮುಖ ಮಾಡಿದ್ದಾರೆ. ಅವರನ್ನು ಗೌರವ ಪೂರ್ವಕವಾಗಿ ಪಕ್ಷ ತನ್ನ ಸಬಲೀಕರಣ ಕಾರ್ಯದಲ್ಲಿ ಬಳಸಿಕೊಳ್ಳಬೇಕಾದುದು ಇಂದಿನ ಅಗತ್ಯ ಎಂದು ಹೇಳಿದ್ದಾರೆ.
ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಮಾತನಾಡಿ ಜ. 22ರಂದು ನಡೆಯಲಿರುವ ಪ್ರಜಾಧ್ವನಿ ಬಸ್ ಯಾತ್ರೆಯನ್ನು ಯಶಸ್ವಿಗೊಳಿಸುವಂತೆ ಕರೆ ನೀಡಿದರು.
ಹೆಬ್ರಿ ಬ್ಲಾಕ್ ಅಧ್ಯಕ್ಷ ಮಂಜುನಾಥ ಪೂಜಾರಿ, ಕೆಪಿಸಿಸಿ ಸದಸ್ಯರಾದ ನೀರೆ ಕೃಷ್ಣ ಶೆಟ್ಟಿ, ಸುರೇಂದ್ರ ಶೆಟ್ಟಿ, ಹಿರಿಯ ನಾಯಕ ಡಿ.ಆರ್. ರಾಜು ಮಾತನಾಡಿದರು. ಜಿಲ್ಲಾ ವಕ್ತಾರ ಬಿಪಿನ್‌ಚಂದ್ರ ಪಾಲ್ ನಕ್ರೆ, ಸಾಮಾಜಿಕ ಜಾಲತಾಣದ ಅಧ್ಯಕ್ಷ ರೋಶನ್ ಶೆಟ್ಟಿ, ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ ಪ್ರಸ್ತಾವನೆಗೈದು ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಜೋಜ್೯ ಕ್ಯಾಸ್ತಲೀನೊ ವಂದಿಸಿದರು.











































error: Content is protected !!
Scroll to Top