ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ : 20 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌

ಮಂಗಳೂರು : ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) 20 ಆರೋಪಿಗಳ ವಿರುದ್ಧ 1,500 ಪುಟಗಳ ಚಾರ್ಜ್​ಶೀಟ್ ಸಲ್ಲಿಸಿದೆ.
ಎನ್​ಐಎ ಅಧಿಕಾರಿಗಳು ಬೆಂಗಳೂರಿನ ಎನ್​ಐಎ ವಿಶೇಷ ನ್ಯಾಯಾಲಯಕ್ಕೆ ಸುದೀರ್ಘ 1500 ಪುಟಗಳ ಚಾರ್ಜ್​ಶೀಟ್​ ಸಲ್ಲಿಸಿದ್ದಾರೆ. 240 ಸಾಕ್ಷಿಗಳ ಹೇಳಿಕೆಗಳು ಸೇರಿ ಒಟ್ಟು 20 ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದಾರೆ.
ಪ್ರವೀಣ್ ಹತ್ಯೆ ಪ್ರಕರಣ ಸಂಬಂಧ ಈವರೆಗೆ 14 ಆರೋಪಿಗಳನ್ನು ಬಂಧಿಸಲಾಗಿದ್ದು, 6 ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ತಲೆಮರೆಸಿಕೊಂಡಿರುವ 6 ಆರೋಪಿಗಳಿಗಾಗಿ ತೀವ್ರ ಹುಡುಕಾಟ ನಡೆಸಿರುವ ಎನ್​ಐಎ ಅಧಿಕಾರಿಗಳು, ಪತ್ತೆಯಾಗದ ಹಿನ್ನಲೆಯಲ್ಲಿ ಲುಕ್​ಔಟ್​ ನೋಟಿಸ್ ಜಾರಿ ಮಾಡಿದ್ದಾರೆ. ಆರೋಪಿಗಳ ಸುಳಿವು ನೀಡಿದವರಿಗೆ ನಗದು ಬಹುಮಾನ ಘೋಷಣೆ ಮಾಡಲಾಗಿದೆ.











































error: Content is protected !!
Scroll to Top