ಹೆಬ್ರಿ : ಮುದ್ರಾಡಿ ಗ್ರಾ.ಪಂ. ಅಧ್ಯಕ್ಷ ಮಂಜುನಾಥ ಹೆಗ್ಡೆ ತಮ್ಮ ಅಧ್ಯಕ್ಷ ಸ್ಥಾನಕ್ಕೆ ಸಲ್ಲಿಸಿದ್ದ ರಾಜೀನಾಮೆಯನ್ನು ಜ. 24 ರಂದು ಹಿಂಪಡೆದಿದ್ದಾರೆ. ರಾಜೀನಾಮೆ ಪತ್ರವನ್ನು ಕಳೆದ ವಾರ ಕುಂದಾಪುರ ಸಹಾಯಕ ಆಯುಕ್ತ ರಾಜು ಅವರಿಗೆ ಸಲ್ಲಿಸಿದ್ದರು. ಮುದ್ರಾಡಿ ಗ್ರಾಮ ಪಂಚಾಯತ್ನಲ್ಲಿ ಜ. 24 ರಂದು ಸುದ್ದಿಗೋಷ್ಠಿಆಯೋಜಿಸಿ ಮಾತನಾಡಿದ ಅವರು, ಕೆಲವೊಂದು ಸಣ್ಣ ಪುಟ್ಟ ಗೊಂದಲಗಳಿಂದಾಗಿ ರಾಜೀನಾಮೆಗೆ ಮುಂದಾಗಿದ್ದೆ, ಈಗ ಅವೆಲ್ಲವೂ ಬಗೆಹರಿದಿದೆ. ಗ್ರಾಮದ ಅಭಿವೃದ್ಧಿಗಾಗಿ ಎಲ್ಲರೂ ಜೊತೆಯಾಗಿ ಶ್ರಮಿಸೋಣ ಎಂದರು. ಈ ಸಂದರ್ಭ ಮುದ್ರಾಡಿ ಗ್ರಾ. ಪಂ. ಸದಸ್ಯರು ಉಪಸ್ಥಿತರಿದ್ದರು.