ರೈತರಿಗೆ 20 ಲಕ್ಷ ರೂ. ಕಡಿಮೆ ಬಡ್ಡಿಯ ಸಾಲ

ಕಾಂಗ್ರೆಸ್‌ನಿಂದ ಇನ್ನೊಂದು ಕೊಡುಗೆ ಘೋಷಣೆ

ಬೆಂಗಳೂರು: ಈಗಾಗಲೇ ಎಲ್ಲರಿಗೂ 200 ಯೂನಿಟ್ ಉಚಿತ ವಿದ್ಯುತ್ ಮತ್ತು ಕುಟುಂಬದ ಯಜಮಾನಿ ಮಹಿಳೆಗೆ ತಿಂಗಳಿಗೆ 2 ಸಾವಿರ ರೂ. ನೀಡುವ ಭರವಸೆ ನೀಡಿರುವ ಕಾಂಗ್ರೆಸ್‌ ಇದೀಗ ಹೊಸದೊಂದು ಕೊಡುಗೆಯನ್ನು ಸೇರ್ಪಡೆ ಮಾಡಿದೆ. ರೈತರಿಗೆ 20 ಲ.ರೂ. ಕಡಿಮೆ ಬಡ್ಡಿಯ ಸಾಲ ಕೊಡುವುದಾಗಿ ಕಾಂಗ್ರೆಸ್‌ ಘೋಷಿಸಿದೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮಂಗಳವಾರ ಈ ಘೋಷಣೆ ಮಾಡಿದ್ದಾರೆ. ತುಮಕೂರಿನಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ ಮಾತನಾಡಿದ ಅವರು, ಶೇ 3ರಷ್ಟು ಬಡ್ಡಿ ದರದಲ್ಲಿ ನೀಡುತ್ತಿರುವ ಸಾಲದ ಮೊತ್ತವನ್ನು ರೂ.10 ಲಕ್ಷದಿಂದ ರೂ.20 ಲಕ್ಷಕ್ಕೆ ಏರಿಕೆ ಮಾಡಲಾಗುವುದು. ಕೊಬ್ಬರಿಗೆ ಪ್ರೋತ್ಸಾಹ ಧನ ನೀಡಲಾಗುವುದು ಎಂದು ಘೋಷಿಸಿದ್ದಾರೆ.

Latest Articles

error: Content is protected !!