ಫೆ.10 ರಿಂದ 24ರವರೆಗೆ ವಿಧಾನಮಂಡಲ ಜಂಟಿ ಮತ್ತು ಬಜೆಟ್​ ಅಧಿವೇಶನ

0

ಬೆಂಗಳೂರು: ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನ ಫೆ. 10ರಿಂದ 24ರವರೆಗೆ ನಡೆಯಲಿದೆ. ಅಂದು ಬೆಳಗ್ಗೆ 11 ಗಂಟೆಗೆ ವಿಧಾನಸಭೆ ಸಭಾಂಗಣದಲ್ಲಿ ಜಂಟಿ ಅಧಿವೇಶನ ಪ್ರಾರಂಭವಾಗಲಿದ್ದು, ರಾಜ್ಯಪಾಲ ಥಾವರ್​ ಚಂದ ಗೆಹ್ಲೋಟ್​ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ವರ್ಷದ ಮೊದಲ ಅಧಿವೇಶನ ಇದಾಗಿದ್ದು ರಾಜ್ಯಪಾಲ ಥಾವರ್​ ಚಂದ ಗೆಹ್ಲೋಟ್ ಅವರು ಜಂಟಿ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ಸಾಧನೆಗಳನ್ನು ಪ್ರಸ್ತಾಪಿಸಲಿದ್ದಾರೆ.
ಫೆ. 17 ರಂದು ಸಿಎಂ ಬಸವರಾಜ ಬೊಮ್ಮಾಯಿ‌ ಬಜೆಟ್ ಮಂಡನೆ ಮಾಡಲಿದ್ದಾರೆ. ಚುನಾವಣಾ ವರ್ಷವಾಗಿರುವುರಿಂದ ಸಿಎಂ ಬೊಮ್ಮಾಯಿ ಜನಪ್ರಿಯ ಕಾರ್ಯಕ್ರಮ ಮತ್ತು ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಹೆಚ್ಚಿದೆ ಎನ್ನಲಾಗುತ್ತಿದೆ. ಫೆ.10ರಂದು ಅಧಿವೇಶನ ಪ್ರಾರಂಭವಾಗಿ ಫೆಬ್ರವರಿ ಅಂತ್ಯದವರೆಗೂ ಅಧಿವೇಶನ ನಡೆಯಲಿದೆ. ಬಜೆಟ್ ಮಂಡನೆ ಬಳಿಕ ಉಭಯ ಸದನಗಳಲ್ಲಿ ಬಜೆಟ್ ಮೇಲೆ ಸುದೀರ್ಘ ಚರ್ಚೆ ನಡೆಯಲಿದೆ. ಬಳಿಕ ಸರ್ಕಾರ ಶಾಸಕರು ಮಾಡಿದ ಚರ್ಚೆಗೆ ಉತ್ತರ ನೀಡಲಿದ್ದಾರೆ. ಆ ನಂತರ ಉಭಯ ಸದನಗಳಲ್ಲಿ ಮುಂಗಡ ಪತ್ರಕ್ಕೆ ಅನುಮೋದನೆ ಪಡೆಯುವುದು ವಾಡಿಕೆ.

Previous article74ನೇ ಗಣರಾಜ್ಯೋತ್ಸವ ಮುಖ್ಯ ಅತಿಥಿ ಈಜಿಪ್ಟ್ ಅಧ್ಯಕ್ಷ ದೆಹಲಿಗೆ ಆಗಮನ : ಪ್ರಧಾನಿ ಮೋದಿಯಿಂದ ಸ್ವಾಗತ
Next articleಕಾರ್ಯಕರ್ತನನ್ನು ರಸ್ತೆಯಲ್ಲಿ ಅಟ್ಟಾಡಿಸಿ ಹಿಗ್ಗಾಮುಗ್ಗಾ ಥಳಿಸಿದ ಬಿಜೆಪಿ ನಾಯಕ

LEAVE A REPLY

Please enter your comment!
Please enter your name here