ರೈಲಿಗೆ ತಲೆಕೊಟ್ಟು ಹೆಬ್ರಿಯ ಯುವಕ ಆತ್ಮಹತ್ಯೆ

ಉಡುಪಿ : ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿಯವರ ವಾಹನ ಚಾಲಕ ಜ.25 ರಂದು ನಸುಕಿನ ವೇಳೆ ಇಂದ್ರಾಳಿ ರೈಲ್ವೆ ಸೇತುವೆ ಸಮೀಪ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಹೆಬ್ರಿ ಸಳಂಜೆ ಗ್ರಾಮದ ಸಂಜೀವ ಹೆಗ್ಡೆಯವರ ಪುತ್ರ ರಾಘವೇಂದ್ರ ಹೆಗ್ಡೆ (34) ಎಂದು ಗುರುತಿಸಲಾಗಿದೆ.
ವೈಯಕ್ತಿಕ ಕಾರಣದಿಂದ ಮನನೊಂದ ಇವರು, ಮಂಗಳೂರು ಮನಪಾ ಮುಖ್ಯ ಲೆಕ್ಕಾಧಿಕಾರಿಗೆ ಸಂಬಂಧಿಸಿದ ಕಾರನ್ನು ಅಲ್ಲೇ ಸಮೀಪ ನಿಲ್ಲಿಸಿ, ಬಳಿಕ ಚಲಿಸುತ್ತಿದ್ದ ರೈಲಿನಡಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೃತದೇಹ ಸಂಪೂರ್ಣ ಛಿದ್ರಗೊಂಡಿದೆ. ಸ್ಥಳದಲ್ಲಿ ಪತ್ತೆಯಾದ ಕಾರಿನ ಹಸಿರು ಫಲಕದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿ ಎಂಬ ಉಲ್ಲೇಖ ಹಾಗೂ ಮೃತರ ಕಿಸೆಯಲ್ಲಿದ್ದ ಆಧಾರ್‌ ಕಾರ್ಡ್‌ ಆಧಾರದಲ್ಲಿ ವ್ಯಕ್ತಿಯ ಗುರುತು ಪತ್ತೆ ಹಚ್ಚಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮಣಿಪಾಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಕಾನೂನು ಪ್ರಕ್ರಿಯೆ ನಡೆಸಿದ್ದಾರೆ.

Latest Articles

error: Content is protected !!