ಪಠಾಣ್‌ ಪ್ರತಿಭಟನೆ ಕಿಚ್ಚು : ನಾಲ್ವರ ಬಂಧನ

ಪ್ರವಾದಿ ವಿರುದ್ಧ ಘೋಷಣೆ ಕೂಗಿದ ಆರೋಪ

ಇಂದೋರ್: ಪಠಾಣ್ ಚಿತ್ರದ ವಿರುದ್ಧ ಬಲಪಂಥೀಯ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯಲ್ಲಿ ಪ್ರವಾದಿ ಮೊಹಮ್ಮದ್ ವಿರುದ್ಧ ಆಕ್ಷೇಪಾರ್ಹ ಘೋಷಣೆಗಳನ್ನು ಕೂಗಲಾಗಿದೆ ಎಂದು ಮುಸ್ಲಿಂ ಸಮುದಾಯದವರು ದೂರು ನೀಡಿದ ನಂತರ ಮಧ್ಯಪ್ರದೇಶದ ಇಂದೋರ್‌ನಲ್ಲಿ ಪೊಲೀಸರು ಬುಧವಾರ ರಾತ್ರಿ ನಾಲ್ವರನ್ನು ಬಂಧಿಸಿದ್ದಾರೆ.
ಇದೆ ವೇಳೆ ನಗರದಲ್ಲಿ ಜಿಹಾದಿ ಶಕ್ತಿಗಳು ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ತಲೆಕಡಿಯುತ್ತೇವೆ ಎಂದು ಪ್ರಚೋದನಕಾರಿ ಘೋಷಣೆ ಹಾಕಿವೆ ಎಂದು ವಿಶ್ವ ಹಿಂದೂ ಪರಿಷತ್ ಆರೋಪಿಸಿದ್ದು,ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಕೆಲವು ಬಲಪಂಥೀಯ ಸಂಘಟನೆಗಳು ಮಧ್ಯಪ್ರದೇಶದ ಕೆಲವು ಭಾಗಗಳಲ್ಲಿ ಪಠಾಣ್ ಚಿತ್ರದ ವಿರುದ್ಧ ಬುಧವಾರ ಪ್ರತಿಭಟನೆ ನಡೆಸಿವೆ. ಕಸ್ತೂರ್ ಟಾಕೀಸ್ ಆವರಣದಲ್ಲಿ ಬಲಪಂಥೀಯ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಪ್ರವಾದಿ ವಿರುದ್ಧ ಆಕ್ಷೇಪಾರ್ಹ ಘೋಷಣೆಗಳನ್ನು ಕೂಗಲಾಯಿತು ಎಂದು ಮುಸ್ಲಿಂ ಸಮುದಾಯದವರು ಆರೋಪಿಸಿದ್ದಾರೆ.
ಅವರ ದೂರಿನ ಆಧಾರದ ಮೇಲೆ, ಎಫ್‌ಐಆರ್ ದಾಖಲಿಸಿ ನಾಲ್ವರನ್ನು ಬಂಧಿಸಲಾಗಿದೆ . ಬುಧವಾರ ರಾತ್ರಿ ನಗರದ ಬದ್ವಾಲಿ ಚೌಕಿ ಪ್ರದೇಶದಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರಚೋದನಾಕಾರಿ ಘೋಷಣೆ ಕೂಗಿದರು ಎಂದು ಇದೇ ವೇಳೆ ವಿಎಚ್‌ಪಿ ಹೇಳಿದೆ.
ವಿಎಚ್‌ಪಿ ರಾಷ್ಟ್ರೀಯ ವಕ್ತಾರ ವಿನೋದ್ ಬನ್ಸಾಲ್ ಟ್ವಿಟರ್‌ನಲ್ಲಿ ಈ ಘೋಷಣೆಯಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಅವರು ರಾಜ್ಯದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಗೃಹ ಸಚಿವ ನರೋತ್ತಮ್ ಮಿಶ್ರಾ ಅವರನ್ನು ಟ್ಯಾಗ್ ಮಾಡಿದ್ದು, ಇಂದು ಇಂದೋರ್‌ನಲ್ಲಿ ಸರ್ ತನ್ ಸೆ ಜುದಾ’ ಗ್ಯಾಂಗ್ ಸಕ್ರಿಯವಾಗಿದೆ ಎಂಬ ಬಗ್ಗೆ ಅವರಿಗೆ ಬಹುಶಃ ತಿಳಿದಿಲ್ಲ ಎಂದಿದ್ದಾರೆ.

Latest Articles

error: Content is protected !!