ಪೊಲೀಸ್ ಸಿಬ್ಬಂದಿಯಿಂದ ಗುಂಡಿನ ದಾಳಿಗೆ ಒಳಗಾಗಿದ್ದ ಸಚಿವ ನಿಧನ

ಭದ್ರತಾ ವ್ಯವಸ್ಥೆಯಲ್ಲಿದ್ದ ಪೊಲೀಸ್‌ ಅಧಿಕಾರಿಯಿಂದಲೇ ಗುಂಡೇಟು

ಭುವನೇಶ್ವರ: ಪೊಲೀಸ್ ಸಿಬ್ಬಂದಿಯಿಂದಲೇ ಗುಂಡಿನ ದಾಳಿಗೆ ಒಳಗಾಗಿದ್ದ ಒಡಿಶಾದ ಆರೋಗ್ಯ ಸಚಿವ ನಬ ಕಿಶೋರ್ ದಾಸ್ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.
ಒಡಿಶಾದ ಝಾರಸುಗುಡ ಜಿಲ್ಲೆಯ ಬ್ರಜರಾಜನಗರ್​ನ ಗಾಂಧಿಚಕ ಎಂಬಲ್ಲಿ ಭಾನುವಾರ ಮಧ್ಯಾಹ್ನ 12.30ಕ್ಕೆ ಭದರತಾ ವ್ಯವಸ್ಥೆಗೆ ನಿಯೋಜನೆಗೊಂಡಿದ್ದ ಎಎಸ್​ಐ ಗೋಪಾಲ್ ಚಂದ್ರ ದಾಸ್ ಸಚಿವರ ಎದೆಗೆ ಗುಂಡು ಹಾರಿಸಿದ್ದ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಚಿವರು ಕೊನೆಯುಸಿರೆಳೆದಿದ್ದಾರೆ.
ನಬ ಕಿಶೋರ್ ಅವರು ಬಿಜು ಪಟ್ನಾಯಕ್ ನೇತೃತ್ವದ ಬಿಜೆಡಿ ಸರ್ಕಾರದಲ್ಲಿ ಪ್ರಭಾವಿ ಸಚಿವರಲ್ಲೊಬ್ಬರಾಗಿದ್ದರು. ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಕಾರಿನಿಂದ ಕೆಳಗಿಳಿಯುವಾಗ ಎಎಸ್‌ಐ ಗೋಪಾಲ್ ಚಂದ್ರ ದಾಸ್‌ ನೇರವಾಗಿ ಎದೆಗೆ ಗುಂಡು ಹಾರಿಸಿದ್ದ. ನಬ ದಾಸ್ ಅವರ ಎದೆಗೆ ಎರಡು ಗುಂಡುಗಳು ಹೊಕ್ಕಿದ್ದವು.
ನಬ ಕಿಶೋರ್ ದಾಸ್ ಅವರು ಇತ್ತೀಚೆಗೆ ಮಹಾರಾಷ್ಟ್ರದ ಶನಿ ಶಿಂಗಣಾಪುರ ದೇವಸ್ಥಾನಕ್ಕೆ ಒಂದು ಕೋಟಿ ರೂ ಮೌಲ್ಯದ ಚಿನ್ನ ಮತ್ತು ಬೆಳ್ಳಿ ವಸ್ತುಗಳನ್ನು ಕಾಣಿಕೆಯಾಗಿ ನೀಡುವ ಮೂಲಕ ಸುದ್ದಿಯಲ್ಲಿದ್ದರು. ಆರೋಪಿ ಗೋಪಾಲ್ ಚಂದ್ರ ದಾಸ್‌ನ್ನು ಪೊಲೀಸರು ಬಂಧಿಸಿದ್ದಾರೆ.





























































































































































































































error: Content is protected !!
Scroll to Top