ಗ್ಯಾರೇಜ್‌ನಲ್ಲಿ ಅಗ್ನಿ ದುರಂತ : ಹಲವು ವಾಹನಗಳು ಭಸ್ಮ

ಮಂಗಳೂರು : ಗ್ಯಾರೇಜ್‌ನಲ್ಲಿ ಭಾರೀ ಅಗ್ನಿ ಅವಘಡ ಉಂಟಾಗಿರುವ ಘಟನೆ ನಗರ ಹೊರವಲಯದ ಜಪ್ಪಿನಮೊಗರು ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರ ಬದಿಯಲ್ಲಿರುವ ವಾಹನ ದುರಸ್ಥಿ ಮಾಡುವ ಗ್ಯಾರೇಜ್ ಸಂಪೂರ್ಣ ಹೊತ್ತಿ ಉರಿಯುತ್ತಿದ್ದು ಹತ್ತಾರು ವಾಹನಗಳು ಬೆಂಕಿಗಾಹುತಿಯಾಗಿವೆ. ಸ್ಥಳಕ್ಕೆ ಅಗ್ನಿಶಾಮಕದಳದ ವಾಹನಗಳು, ಪೊಲೀಸ್ ಅಧಿಕಾರಿಗಳು ಧಾವಿಸಿ ಬಂದಿದ್ದು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಗ್ಯಾರೇಜ್‌ ಪಕ್ಕದಲ್ಲಿರುವ ವಿದ್ಯುತ್ ಟ್ರಾನ್ಸ್‌ಫರ್ಮರ್ ಸ್ಪೋಟಗೊಂಡು ಈ ಅವಘಡ ಸಂಭವಿಸಿದೆ ಎಂದು ಆರಂಭಿಕ ಮಾಹಿತಿ ಲಭ್ಯವಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.



































































































































































































































































error: Content is protected !!
Scroll to Top