ಮಂಗಳೂರು: ಮಂಗಳೂರಿನ ಲಾಡ್ಜ್‌ನಲ್ಲಿ ದಂಪತಿ ನೇಣುಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ದಂಪತಿಯನ್ನು ಕೇರಳದವರು ಎಂದು ಗುರುತಿಸಲಾಗಿದೆ.
ಫೆ.6ರಂದು ಫಳ್ನೀರ್‌ನ ಲಾಡ್ಜ್‌ನಲ್ಲಿ ರೂಂ ಪಡೆದಿದ್ದ ಕೇರಳ ಮೂಲದ 55 ವರ್ಷದ ರವೀಂದ್ರ ಹಾಗೂ ಅವರ ಪತ್ನಿ 50 ವರ್ಷದ ಸುಧಾ ಆತ್ಮಹತ್ಯೆ ಮಾಡಿಕೊಂಡವರು. ಬುಧವಾರ ಅವರ ಮೃತದೇಹ ಕೊಠಡಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಆಗಮಿಸಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಅವರು ಮೃತರು ಕೇರಳ ಮೂಲದವರಾಗಿದ್ದು ಬಟ್ಟೆ ವ್ಯಾಪಾರಿ ಎಂಬ ಮಾಹಿತಿ ಇದೆ. ಆತ್ಮಹತ್ಯೆಗೆ ಕಾರಣ ಏನೆಂದು ಗೊತ್ತಾಗಿಲ್ಲ. ಪರಿಶೀಲನೆ ನಡೆಸಲಾಗುತ್ತಿದೆ ಎಂದಿದ್ದಾರೆ.
ಮಂಗಳೂರು ಲಾಡ್ಜ್‌ನಲ್ಲಿ ದಂಪತಿ ಆತ್ಮಹತ್ಯೆ






























































