ಈದು : ವಿಶೇಷ ಚೇತನರ ಸಮನ್ವಯ ಗ್ರಾಮಸಭೆ

ಕಾರ್ಕಳ : ಈದು ಗ್ರಾಮ ಪಂಚಾಯತ್‌ನ 2022-23ನೇ ಸಾಲಿನ ವಿಶೇಷ ಚೇತನರ ಸಮನ್ವಯ ಗ್ರಾಮಸಭೆ ಮತ್ತು ಸವಲತ್ತು ವಿತರಣಾ ಕಾರ್ಯಕ್ರಮ ಮಂಗಳವಾರ ಗ್ರಾಮ ಪಂಚಾಯತ್‌ನ ವಾಜಪೇಯಿ ಸಭಾಭವನದಲ್ಲಿ ನಡೆಯಿತು.
ಪಂಚಾಯತ್ ಅಧ್ಯಕ್ಷೆ ಜಯಂತಿ ಅಧ್ಯಕ್ಷತೆ ವಹಿಸಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಧೀಶ್ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ನಿವೃತ್ತ ಸಹಾಯಕ ನಿರ್ದೇಶಕರು ಹಿರಿಯ ನಾಗರಿಕರ ಮತ್ತು ವಿಕಲಚೇತನರ ಸಬಲೀಕರಣ ಇಲಾಖೆ ನಿರಂಜನ್ ಭಟ್ ಭಾಗವಹಿಸಿದ್ದರು. ಉಪಾಧ್ಯಕ್ಷ ಎನ್.ವಿಜಯ ಕುಮಾರ್ ವಿಶೇಷ ಚೇತನರನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯದರ್ಶಿ ಅಂಬುಜಾ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಪಂಚಾಯತ್ ಸರ್ವ ಸದಸ್ಯರು, ಸಿಬ್ಬಂದಿ ವರ್ಗದವರು, ವಿ.ಆರ್. ಡಬ್ಲ್ಯು ಪ್ರಕಾಶ್ ಉಪಸ್ಥಿತರಿದ್ದರು.









































































































error: Content is protected !!
Scroll to Top