ಕಾರ್ಕಳ : ಕುಕ್ಕುಂದೂರು ಗ್ರಾಮದ ಜಯಂತಿನಗರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆ. 27 ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಉದ್ಯಮಿಗಳು, ಶಾಲೆಗೆ ದಾನಿಗಳಾಗಿರುವ ಜ್ಯೋತಿ ಪೈ, ಉಷಾ ಭಟ್, ಪೋಷಕಿ ಪ್ರಮೀಳಾ, ಬಿಸಿಯೂಟ ಸಿಬ್ಬಂದಿ ಸುಶೀಲ, ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎಸ್ಡಿಎಂಸಿ ಅಧ್ಯಕ್ಷೆ ಶಶಿಕಲಾ ಅಧ್ಯಕ್ಷತೆ ವಹಿಸಿದ್ದರು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.
ಕೊಡುಗೆ
ಜ್ಯೋತಿ ಪೈ ಅವರು ಮಕ್ಕಳಿಗೆ ಕೊಡುಗೆಯಾಗಿ ನೀಡಿದ ಬಟ್ಟಲು ಹಾಗೂ ಕಲಿಕಾ ಸಾಮಗ್ರಿಗಳನ್ನು ಇದೇ ಸಂದರ್ಭದಲ್ಲಿ ವಿತರಿಸಲಾಯಿತು. ದಾನಿಗಳಾದ ಜ್ಯೋತಿ ಪೈ ಹಾಗೂ ಉಷಾ ಭಟ್ ಅವರನ್ನು ಶಾಲಾ, ಎಸ್ಡಿಎಂಸಿ ವತಿಯಿಂದ ಸನ್ಮಾನಿಸಲಾಯಿತು. ಜ್ಯೋತಿ ವೆಲನ್ಕರ್ ಸ್ವಾಗತಿಸಿ, ಮುಖ್ಯ ಶಿಕ್ಷಕಿ ಜೆಸಿಂತ ಜ್ಯೋತಿದಾಂತೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.






































