ಲೆಕ್ಕಪತ್ರವಿಲ್ಲದ ಹಣದ ಮೂಟೆ
ಹುಬ್ಬಳ್ಳಿ : ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತುಅವರ ಮಗನ ಮನೆಯಲ್ಲಿ 8 ಕೋಟಿಗೂಅಧಿಕ ನಗದು ಪತ್ತೆಯಾದ ಬೆನ್ನಿಗೆ ಇದೀಗ ಹುಬ್ಬಳ್ಳಿಯ ಉದ್ಯಮಿಯೊಬ್ಬರ ಮನೆಯಲ್ಲಿ ನೋಡಿನ ಮೂಟೆ ಸಿಕ್ಕಿದೆ. ಹುಬ್ಬಳ್ಳಿಯ ಉದ್ಯಮಿಯೊಬ್ಬರ ಮನೆ ಮೇಲೆ ಸಿಸಿಬಿ ದಾಳಿ ನಡೆಸಿದಾಗ ಬರೋಬ್ಬರಿ 3 ಕೋಟಿ ರೂಪಾಯಿ ನಗದು ಪತ್ತೆಯಾಗಿದೆ.
ಹುಬ್ಬಳ್ಳಿಯ ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ರಮೇಶ್ ಬೊಣಗೇರಿ ನಿವಾಸದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಮೂರು ಕೋಟಿ ರೂಪಾಯಿ ನಗದು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಮೇಶ್ ಬೊಣಗೇರಿ ಕೃಷಿ ಇಲಾಖೆಗೆ ರಾಸಾಯನಿಕ ಸರಬರಾಜು ಮಾಡುತ್ತಿದ್ದ ಉದ್ಯಮಿಯಾಗಿದ್ದಾರೆ.
ಉದ್ಯಮಿ ರಮೇಶ್ ಅವರು ಹಣದ ಮೂಲದ ಬಗ್ಗೆ ಯಾವುದೇ ದಾಖಲೆ ನೀಡಿಲ್ಲ. ಹೀಗಾಗಿ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಆದಾಯ ತೆರಿಗೆ ಇಲಾಖೆಗೆ ವರ್ಗಾಯಿಸಲಾಗಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.



































