ಅಣ್ಣಾಮಲೈ ವಿರುದ್ಧ ಪೊಲೀಸರಿಂದ ಪ್ರಕರಣ ದಾಖಲು

ಚೆನ್ನೈ: ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರು ರಾಜ್ಯದಲ್ಲಿ ವಲಸೆ ಕಾರ್ಮಿಕರ ಮೇಲೆ ನಡೆಯುತ್ತಿರುವ ದಾಳಿಗೆ ಆಡಳಿತಾರೂಢ ಡಿಎಂಕೆ ಪಕ್ಷವೇ ಕಾರಣ ಎಂದು ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ತಮಿಳುನಾಡು ಪೊಲೀಸರು ಹಿಂಸಾಚಾರ ಪ್ರಚೋದನೆ ಹಾಗೂ ದ್ವೇಷ ಬಿತ್ತುವ ಆರೋಪದ ಮೇಲೆ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ತಮಿಳುನಾಡು ಸೈಬರ್‌ ಕ್ರೈಂ ವಿಭಾಗ ಅಣ್ಣಾಮಲೈ, ಬಿಹಾರದ ಕೆಲವು ಬಿಜೆಪಿಯ ಟ್ವಿಟರ್ ಖಾತೆದಾರರ ವಿರುದ್ಧವೂ ಪ್ರಕರಣ ದಾಖಲಾಗಿದೆ.ತಮಿಳುನಾಡಿನಲ್ಲಿ ವಲಸೆ ಕಾರ್ಮಿಕರು ಸುರಕ್ಷಿತವಾಗಿದ್ದಾರೆ ಆದರೆ ಮುಖ್ಯಮಂತ್ರಿ ಸ್ಟಾಲಿನ್ ನೇತೃತ್ವದ ಡಿಎಂಕೆ ಹಾಗೂ ಅದರ ಮೈತ್ರಿ ಪಕ್ಷದ ನಾಯಕರು ಅವರ ಮೇಲಿನ ದ್ವೇಷಕ್ಕೆ ಕಾರಣವಾಗುತ್ತಿದ್ದಾರೆ ಎಂದು ಆರೋಪ ಮಾಡಿದ್ದರು.ಈ ಬಗ್ಗೆ ಸರಣಿ ಟ್ವೀಟ್‌ಗಳ ಮೂಲಕ ಸರ್ಕಾರ ಹಾಗೂ ಸಚಿವರ ವಿರುದ್ಧ ವಾಗ್ದಾಳಿ ನಡೆಸಿದ್ದರು.

































































































































































error: Content is protected !!
Scroll to Top