ಮಾ. 8 ರಂದು ಬಿಎಂಟಿಸಿ ಬಸ್‌ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ

ಬೆಂಗಳೂರು: ಮಾ.8 ರಂದು ಬಿಎಂಟಿಸಿ ಬಸ್‌ನಲ್ಲಿ ಮಹಿಳೆಯರು ಎಲ್ಲಿಂದ ಎಲ್ಲಿಗೆ ಬೇಕಾದರೂ ಸಂಪೂರ್ಣ ಉಚಿತವಾಗಿ ಪ್ರಯಾಣಿಸಬಹುದು.
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಗೆ ರಾಜಧಾನಿಯ ಮಹಿಳೆಯರಿಗೆ ಬಿಎಂಟಿಸಿ ವತಿಯಿಂದ ಉಚಿತ ಪ್ರಯಾಣ ವಿಶೇಷ ಕೊಡುಗೆ ನೀಡಲಾಗಿದೆ. ಮಾ.7ರ ಮಧ್ಯರಾತ್ರಿ 12 ಗಂಟೆಯಿಂದ ಬುಧವಾರ ಮಧ್ಯರಾತ್ರಿ 12 ಗಂಟೆಯವರೆಗೂ ಬಿಎಂಟಿಸಿ ಬಸ್‌ಗಳಲ್ಲಿ ಸಂಪೂರ್ಣ ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ಬಿಎಂಟಿಸಿಯ ಎಲ್ಲಾ ಮಾದರಿಯ ಬಸ್‌ಗಳಲ್ಲಿಯೂ ಬುಧವಾರ ಮಹಿಳೆಯರಿಗೆ ಉಚಿತ ಪ್ರಯಾಣ ಅವಕಾಶವಿದೆ. ಎಸಿ, ವೋಲ್ವೊ ವಜ್ರ, ವಾಯುವಜ್ರ ಬಸ್‌ಗಳಲ್ಲಿಯೂ ಹಣ ನೀಡದೇ ಸಂಚರಿಸಬಹುದು.ಯಾವುದೇ ದಾಖಲಾತಿ, ಗುರುತಿನ ಚೀಟಿಯೂ ಅವಶ್ಯಕತೆ ಇಲ್ಲ ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಸರ್ಕಾರಕ್ಕೆ ಪತ್ರಬರೆದಿದ್ದರು
ಮಹಿಳಾ ದಿನಾಚರಣೆ ಹಿನ್ನೆಲೆ ಮಹಿಳೆಯರಿಗೆ ಉಚಿತ ಬಸ್‌ಪಾಸ್‌ ಸೌಲಭ್ಯ ಕಲ್ಪಿಸಿಕೊಡಬೇಕು ಎಂದು ಬಿಎಂಟಿಸಿ ವ್ಯಸ್ಥಾಪಕ ನಿದೇಶಕಿ ಸತ್ಯವತಿ ಅವರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಅದರಂತೆ ಸರ್ಕಾರವು ಒಪ್ಪಿಗೆ ನೀಡಿದ್ದು, ಮಹಿಳೆಯರಿಗೆ ಒಂದು ದಿನದ ಮಟ್ಟಿಗೆ ಉಚಿತ ಪ್ರಯಾಣ ಸೌಲಭ್ಯ ಸಿಗಲಿದೆ.









































































































error: Content is protected !!
Scroll to Top