ಕಾರ್ಕಳ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಷ್ಟ್ರೀಯ ಮಹಿಳಾ ಆಯೋಗ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವೆಗಳ ಸಮಿತಿ, ಕಾರ್ಕಳ ನ್ಯಾಯವಾದಿಗಳ ಸಂಘ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮಂಡಳಿ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಮಹಿಳಾ ಸಾಪ್ತಾಹಿಕ ಅಂಗವಾಗಿ ಮಾ. 10 ರಂದು ಬೆಳಗ್ಗೆ 10 ಗಂಟೆಗೆ ಕಾರ್ಕಳದ ಸ್ತ್ರೀ ಶಕ್ತಿ ಸಭಾಭವನದಲ್ಲಿ ಉಚಿತ ಕಾನೂನು ಅರಿವು ನೆರವು ಕಾರ್ಯಕ್ರಮ ಜರುಗಲಿದೆ.
ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷೆ ರೂಪಶ್ರೀ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಚಿವ ವಿ. ಸುನೀಲ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಧಾನ ಸಿವಿಲ್ ನ್ಯಾಯಾಧೀಶೆ ಚೇತನಾ ಎಸ್. ಎಫ್, ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಕೋಮಲಾ ಆರ್ . ಸಿ. ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಉಮೇಶ್ ಟಿ. ಎಲ್. ಉಪಸ್ಥಿತರಿರಲಿದ್ದಾರೆ. ಸಂಪನ್ಮೂಲ ವ್ಯಕ್ತಿಗಳಾಗಿ ಪ್ಯಾನಲ್ ವಕೀಲರಾದ ಮುಕ್ತಾ ಹಾಗೂ ವಸಂತಿ ಭಾಗವಹಿಸಲಿದ್ದು ಕಾನೂನು ಮಾಹಿತಿ ನೀಡಲಿದ್ದಾರೆ ಎಂದು ಆಯೋಜಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.






























































