ಹಾವೇರಿಯಲ್ಲಿ ಕೋಮು ಗಲಭೆ : 20 ಮಂದಿ ವಶ

ಮೆರವಣಿಗೆ ವೇಳೆ ಕಲ್ಲುತೂರಾಟ; ಹಿಂಸಾಚಾರದಲ್ಲಿ ಹಲವರಿಗೆ ಗಾಯ

ಹಾವೇರಿ : ಹಾವೇರಿ ಜಿಲ್ಲೆಯ ರಟ್ಟಿಹಳ್ಳಿಯಲ್ಲಿ ಕೋಮು ಹಿಂಸಾಚಾರದ ಕಿಡಿ ಹತ್ತಿಕೊಂಡಿದೆ. ಹಿಂದೂಪರ ಸಂಘಟನೆಗಳು ಆಯೋಜಿಸಿದ್ದ ಬೃಹತ್ ಬೈಕ್ ರ್‍ಯಾಲಿ ವೇಳೆ ಗಲಾಟೆ ನಡೆದಿದ್ದು, 20ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಮಾ.9 ರಂದು ನಡೆದಿದ್ದ ಎರಡು ಕೋಮುಗಳ ನಡುವಿನ ಗಲಾಟೆಯ ಮುಂದುವರಿಕೆ ಇದು ಎನ್ನಲಾಗಿದೆ. ಬೈಕ್ ರ್‍ಯಾಲಿ ವೇಳೆ ಕೆಲ ಯುವಕರು ಮಸೀದಿ ಮೇಲೆ ಕಲ್ಲು ತೂರಾಟ ನಡೆಸಿರುವುದು ಗಲಭೆಗೆ ಕಾರಣವಾಗಿದೆ.
ಕಾರಂಜಿ ಸರ್ಕಲ್‌ನಲ್ಲಿ ನಡೆಯುತ್ತಿದ್ದ ಬೈಕ್ ರ್‍ಯಾಲಿ ವೇಳೆ ಆಟೋ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಲಾಗಿದ್ದು, ಮಸೀದಿ ಮತ್ತು ಮನೆಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಕೆಲ ಮಕ್ಕಳು ಹಾಗೂ ಮಹಿಳೆಯರಿಗೆ ಕಲ್ಲು ತೂರಾಟದಿಂದ ಗಾಯವಾಗಿದ್ದು, ಸ್ಥಳದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು 20 ಮಂದಿಯನ್ನು ವಶಕ್ಕೆ ಪಡೆದು ಹೈ ಆಲರ್ಟ್ ಘೋಷಿಸಿದ್ದಾರೆ.
ನಾಲ್ಕು ದಿನಗಳ ಹಿಂದೆ ಸಂಗೊಳ್ಳಿ ರಾಯಣ್ಣ ಮೂರ್ತಿ ಮೆರವಣಿಗೆ ವೇಳೆ ಮುಸ್ಲಿಮರು ಅಡ್ಡಿಪಡಿಸಿದ್ದರು. ಎರಡು ಕೋಮುಗಳ ನಡುವೆ ಗಲಾಟೆ ನಡೆದಿತ್ತು. ಕೈಯಲ್ಲಿ ಕಲ್ಲು ಹಿಡಿದು ನಿಂತಿದ್ದ ಯುವಕರು, ಬ್ಯಾರಿಕೇಡ್ ಕಿತ್ತೆಸೆದು ಮೆರವಣಿಗೆಗೆ ಅಡ್ಡಿಪಡಿಸಿದ್ದರು. ಗಲಾಟೆ ನಡೆದಿದ್ದ ಹಿನ್ನೆಲೆಯಲ್ಲಿ ಹಿಂದೂ ಕಾರ್ಯಕರ್ತರು ಮಂಗಳವಾರ ಬೃಹತ್ ಬೈಕ್ ರ್‍ಯಾಲಿ ನಡೆಸಿದ್ದಾರೆ.





























































































error: Content is protected !!
Scroll to Top